ಬೆಂಗಳೂರು: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಏಕಮುಖ ರಸ್ತೆಯಲ್ಲಿ ಸಂಚಾರ ನಡೆಸುತ್ತಿದ್ದ ವಾಹನಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶವ ಸಾಗಿಸುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ - ಬೆಂಗಳೂರು ಅಪಘಾತ
ಏಕಮುಖ ರಸ್ತೆಯಲ್ಲಿ ಸಂಚಾರ ನಡೆಸುತ್ತಿದ್ದ ವಾಹನಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ.
ಹಲಸೂರು ಸಂಚಾರ ಠಾಣೆಯ ಟ್ರಿನಿಟಿ ಸರ್ಕಲ್ ಬಳಿ ಇಂದು ಮಧ್ಯಾಹ್ನ ಘಟನೆ ನಡೆದಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಟ್ರಿನಿಟಿ ಸರ್ಕಲ್ನಲ್ಲಿ ದ್ವಿಪಥ ರಸ್ತೆಯನ್ನು ಏಕಮುಖ ರಸ್ತೆಯಾಗಿ ಸಂಚಾರ ಪೊಲೀಸರು ಪರಿವರ್ತನೆ ಮಾಡಿ ಏಕಮುಖ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.
ಇಂದು ಮಧ್ಯಾಹ್ನ ಒಂದು ಕಡೆಯಿಂದ ಶವದ ವಾಹನ ಹಾಗೂ ಇನ್ನೊಂದು ಬದಿಯಲ್ಲಿ ಬೈಕ್ ವೇಗವಾಗಿ ಬಂದಿದ್ದರಿಂದ ಎರಡು ವಾಹನ ಡಿಕ್ಕಿಯಾಗಿವೆ. ಬೈಕ್ ಸವಾರನ ತಲೆಗೆ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡರೆ, ಶವದ ವಾಹನ ಹಾನಿಯಾಗಿದೆ. ಅಪಘಾತದಲ್ಲಿ ಮತ್ತೊಂದು ಕಾರಿಗೂ ಹಾನಿಯಾಗಿದೆ ಎಂದು ಹಲಸೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.