ಬೆಂಗಳೂರು: ನಗರದಲ್ಲಿ ಮತ್ತೆ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ರಸ್ತೆ ಬದಿಯಲ್ಲಿ ಪಾರ್ಕ್ ಮಾಡುವ ಬೈಕ್‌ಗಳನ್ನೇ ಟಾರ್ಗೆಟ್ ಮಾಡುವ ಕಳ್ಳರು ಕತ್ತಲಾಗುತ್ತಿದ್ದಂತೆ ಬಂದು ಬೈಕ್ ಹ್ಯಾಂಡ್ ಲಾಕ್ ಮುರಿದು ಬೈಕ್ ಮೇಲೆ ಕೂತು ಎಸ್ಕೇಪ್ ಆಗ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಸ್ಕೇಪ್... ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ - ಬೈಕ್ ಕಳ್ಳ
ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳನೋರ್ವ ಬೈಕ್ನ ಹ್ಯಾಂಡ್ ಲಾಕ್ ಮುರಿದು ಎಸ್ಕೇಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯಾವಳಿ
ನಗರದ ನಾಗವಾರದ ಮರಿಯಮ್ಮ ಲೇಔಟ್ ಬಳಿ ಭಾನುಪ್ರಕಾಶ್ ಎಂಬುವವರು ಬೈಕನ್ನು ಮನೆ ಮುಂದೆ ನಿಲ್ಲಿಸಿ ತೆರಳಿದ್ದರು. ಈ ವೇಳೆ ಕಳ್ಳ ಬಂದು ಅದನ್ನ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ಇದೇ ರೀತಿ ಒಂದೇ ದಿನ ನಾಗವಾರ ಸುತ್ತಮುತ್ತ ಕಳ್ಳರು ನಾಲ್ಕು ಬೈಕ್ ಎಗರಿಸಿದ್ದಾರೆ. ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಕೆ.ಜಿ ಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯ ಆಧಾರದ ಮೇಲೆ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.