ಬೆಂಗಳೂರು:ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳನ ಬಂಧನ: 8 ಲಕ್ಷ ಮೌಲ್ಯದ 6 ಬೈಕ್ ವಶ - ಬೆಂಗಳೂರು crime news
ಸರಣಿ ಕಳ್ಳತನದಲ್ಲಿ ತೊಡಗಿದ್ದ ಆರೋಪಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 8.15 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಬೈಕ್ ಕಳ್ಳನ ಬಂಧನ
ಕಾವೇರಿಪುರ ನಿವಾಸಿ ಅನಿಲ್ ಕುಮಾರ್ (24) ಬಂಧಿತ ಆರೋಪಿ. ಫೆಬ್ರವರಿ 21ರಂದು ಮನೆ ಮುಂದೆ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಬೈಕ್ ಮಾಲೀಕ ದೂರು ನೀಡಿದ್ದರು. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ 8.15 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ಕೀ ಬಳಸಿ ಆರೋಪಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.