ಕರ್ನಾಟಕ

karnataka

ETV Bharat / state

ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ ಕಳ್ಳತನ: ಆರೋಪಿಯ ಬಂಧನ, 7 ವಾಹನಗಳು ವಶ - bengalur latest crime news

ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್ ಕಳ್ಳನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

bike thief arrests in bengaluru news
ಕುಖ್ಯಾತ ಬೈಕ್ ಕಳ್ಳ

By

Published : Jul 11, 2021, 3:02 PM IST

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನು ಕದಿಯುತ್ತಿದ್ದ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹನುಮಂತ ಬಂಧಿತ ಆರೋಪಿ.

ಈತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಏಳು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ನಾಲ್ಕು ಲಕ್ಷ ರೂ ಆಗಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಸಂಜೀವ್ ಪಾಟೀಲ್ ಪ್ರಕರಣದ ಬಗೆಗೆ ಮಾಹಿತಿ ನೀಡಿದ್ದಾರೆ.

ದೂರುದಾರರೊಬ್ಬರು ತಮ್ಮ ಹೀರೋ ಹೋಂಡಾ ಕೆಎ-02-26-3833 ದ್ವಿಚಕ್ರ ವಾಹನ ದಿನಾಂಕ ಜೂನ್ 10 ರಂದು ರಾತ್ರಿ ಮುದ್ದಿನಪಾಳ್ಯದಲ್ಲಿರುವ ಮನೆಯ ಮುಂದೆ ನಿಲ್ಲಿಸಿದ್ದಾಗ ಕಳ್ಳತನವಾಗಿದೆ ಎಂದು ತಿಳಿಸಿದ್ದರು. ಈ ಕುರಿತು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು ಎಂದು ತಿಳಿಸಿದರು.

ಆರೋಪಿಯು ನೀಡಿದ ಮಾಹಿತಿ ಮೇರೆಗೆ ಅನ್ನಪೂರ್ಣೇಶ್ವರಿನಗರ, ಜ್ಞಾನಭಾರತಿ, ಕೆಂಗೇರಿ, ನಂದಿನಿ ಲೇಔಟ್ ಹಾಗೂ ಬ್ಯಾಡರಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಳವು ಮಾಡಿದ್ದ ಸುಮಾರು 4 ಲಕ್ಷ ರೂ ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ABOUT THE AUTHOR

...view details