ಕರ್ನಾಟಕ

karnataka

By

Published : Jul 5, 2019, 4:31 AM IST

ETV Bharat / state

ಮನೆಮುಂದೆ ನಿಲ್ಲಿಸಿದ್ದ  ರಾಯಲ್​ ಎನ್​ಫೀಲ್ಡ್ ಕದ್ದು ಪರಾರಿಯಾದ ಕಳ್ಳರು... ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕೆಂಗೇರಿ ವ್ಯಾಪ್ತಿಯಲ್ಲಿ ಬರುವ ಮನೆಯೊಂದರ ಮುಂದೆ ನಿಲ್ಲಿಸಿದ್ದ ಬೈಕ್​ನ್ನು ಕಳ್ಳರು ಕಳ್ಳತನ ಮಾಡಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Bangalore

ಬೆಂಗಳೂರು:ಕೆಂಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು, ಬೈಕ್​ ಕದ್ದು ಪರಾರಿಯಾಗಿದ್ದಾರೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳರು ಬೈಕ್​ ಕಳ್ಳತನ ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆಂಗೇರಿ ವ್ಯಾಪ್ತಿಯಲ್ಲಿ ಬರುವ ಶ್ರೀನಿವಾಸ್ ಎಂಬುವವರು ತಮ್ಮ ಮನೆಯ ಮುಂದೆ ರಾಯಲ್​ ಎನ್​ಫೀಲ್ಡ್​ ಬೈಕ್​ ನಿಲ್ಲಿಸಿದ್ದರು. ಇದನ್ನು ಗಮನಿಸಿದ ಕಳ್ಳರು ಬೆಳಗಿನ ಜಾವ ಬೈಕ್​ ಕದ್ದು ಪರಾರಿಯಾಗಿದ್ದಾರೆ. ‌ಮರುದಿನ ಬೆಳಗ್ಗೆ ಬೈಕ್ ಇಲ್ಲದ್ದನ್ನು ನೋಡಿ ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details