ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಬೈಕ್ ಸವಾರರನ್ನು ವಿಮಾನ ನಿಲ್ದಾಣ ಸಂಚಾರ ಪೊಲೀಸರು ಬಂಧಿಸಿದ್ದಾರೆ.
ಏರ್ಪೋರ್ಟ್ ರಸ್ತೆಯಲ್ಲಿ ಬೈಕ್ ವ್ಹಿಲಿಂಗ್: ಇಬ್ಬರು ಅಂದರ್ - Accused Arrest
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಬೈಕ್ ಸವಾರರನ್ನು ವಿಮಾನ ನಿಲ್ದಾಣ ಸಂಚಾರಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೈಕ್ ವ್ಹಿಲಿಂಗ್ ಮಾಡುತ್ತಿರುವ ದೃಶ್ಯ
ನಗರದ ವಿದ್ಯಾರಣ್ಯಾಪುರ ನಿವಾಸಿ ಸಾಗರ್ (19) ಮತ್ತು ಬೈಯಪ್ಪನಹಳ್ಳಿ ನಿವಾಸಿ ಸತೀಶ್ (19) ಬಂಧಿತರು.
ಇವರಿಂದ ಎರಡು ಬೈಕ್ಗಳನ್ನು ವಶಕ್ಕೆ ಪಡೆದ ಪೊಲೀಸರು, ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.