ಕರ್ನಾಟಕ

karnataka

ETV Bharat / state

ಇಂದೇ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ: ಸಚಿವ ಪ್ರಭು ಚೌವ್ಹಾಣ್​​ - Minister Prabhu Chauhan

ಇಂದೇ ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ ಮಾಡಲಿದ್ದು, ಇಂದೇ ಒಪ್ಪಿಗೆ ಪಡೆಯುವ ಪ್ರಯತ್ನ ಮಾಡುವುದಾಗಿ ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು.

banglore
ಪ್ರಭು ಚವ್ಹಾಣ್

By

Published : Dec 9, 2020, 4:34 PM IST

ಬೆಂಗಳೂರು:ರಾಜ್ಯದಲ್ಲಿ ಕಠಿಣ ರೀತಿಯ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಿದ್ದು, ಇಂದೇ ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ದಿನದಿಂದಲೂ ನಾವು ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ್ದೆವು. ರಾಜ್ಯದಲ್ಲಿ ಗೋ ರಕ್ಷಣೆ ಆಗಬೇಕು. ಹಾಗಾಗಿ ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಕ್ಕೆ ಹೋಗಿ ಅಧ್ಯಯನ ಮಾಡಿ ಖಡಕ್ ಕಾನೂನು ರೂಪಿಸಲು ವಿಧೇಯಕ ಮಂಡಿಸುತ್ತಿದ್ದೇವೆ. ಇಂದೇ ಸದನದಲ್ಲಿ ಮಂಡನೆ ಮಾಡಲಿದ್ದು, ಇಂದೇ ಒಪ್ಪಿಗೆ ಪಡೆಯುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಗ್ರಾಮ ಪಂಚಾಯತ್ ಚುನಾವಣೆಗೂ ಗೋಹತ್ಯೆ ನಿಷೇಧ ಕಾಯ್ದೆಗೂ ಯಾವುದೇ ಸಂಬಂಧ ಇಲ್ಲ. ನೀತಿ ಸಂಹಿತೆ ವಿಷಯ ಅಡ್ಡ ಬರುವುದಿಲ್ಲ. ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯಲ್ಲ. ಹಾಗಾಗಿ ಹೊಸ ಬಿಲ್​ಗಳನ್ನು ತರಲು ಯಾವುದೇ ಸಮಸ್ಯೆ ಇಲ್ಲ. ವಿರೋಧ ಪಕ್ಷ ವಿರೋಧ ಮಾಡಲೇಬೇಕು. ಅದಕ್ಕಾಗಿ ಸಿದ್ದರಾಮಯ್ಯ ವಿರೋಧ ಮಾಡುತ್ತಿದ್ದಾರೆ, ಮಾಡಲಿ ಬಿಡಿ ಎಂದರು.

ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ನಡುವೆ ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಒಪ್ಪಿಗೆ

ನಾವು ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ಸಂಪುಟ ಒಪ್ಪಿಗೆ ನೀಡಿದೆ. ಕೇಂದ್ರದ ನಾಯಕರು, ನಮ್ಮ ಪಕ್ಷದ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಠಿಣ ರೀತಿಯ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿದೆ ಎಂದರು.

ABOUT THE AUTHOR

...view details