ಕರ್ನಾಟಕ

karnataka

ETV Bharat / state

ನಿಯಂತ್ರಣಕ್ಕೆ ಬಂದ ಕೋವಿಡ್: ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪುನಾರಂಭ - ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಾರಂಭಿಸಲಾಗಿದೆ.

biometric-attendance-restarted-in-government-offices
ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪುನಾರಂಭ

By

Published : Feb 18, 2022, 4:35 PM IST

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಚಿವಾಲಯ ಸಿಬ್ಬಂದಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಾರಂಭಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಾರಂಭಿಸಲಾಗಿದೆ. ಸಚಿವಾಲಯ ಮತ್ತು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳ ಅಧಿಕಾರಿ/ಸಿಬ್ಬಂದಿಯು ಬಯೋಮೆಟ್ರಿಕ್ ಯಂತ್ರದಲ್ಲಿ ತಮ್ಮ ಹಾಜರಾತಿಯನ್ನು ದಾಖಲಿಸುವಂತೆ ಸೂಚಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮಮತ ಶರ್ಮ ಎಸ್. ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ:ಸೂಪರ್ ಮಾಡೆಲ್ ಆದ ದಿನಗೂಲಿ ಕಾರ್ಮಿಕ : ಅಷ್ಟಕ್ಕೂ ಯಾರೀತ?

ಕೊರೊನಾ ಸೋಂಕು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ 2022ರ ಜನವರಿ 11ರಂದು ಸಚಿವಾಲಯ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ರಾಜ್ಯ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿ ಆದೇಶ ಹೊರಡಿಸಿತ್ತು. ಇದೀಗ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಮತ್ತೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರುತ್ತಿದೆ.

ABOUT THE AUTHOR

...view details