ಕರ್ನಾಟಕ

karnataka

ETV Bharat / state

ಜನನ, ಮರಣ ಪ್ರಮಾಣ ನೋಂದಣಿ ವ್ಯಾಜ್ಯ ನಿರ್ವಹಣೆ: ಕಂದಾಯ ಇಲಾಖೆಗೆ ವರ್ಗಾಯಿಸಿದ್ದ ಕ್ರಮ ರದ್ದು - ಅಧಿಸೂಚನೆ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ

ಜನನ ಮರಣಗಳ ನೋಂದಣಿ ವ್ಯಾಜ್ಯ ಇತ್ಯರ್ಥಪಡಿಸುವ ಅಧಿಕಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಇತ್ತು. ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗೆ ಈ ಅಧಿಕಾರ ವರ್ಗಾಯಿಸಿ ರಾಜ್ಯ ಸರ್ಕಾರ 2022ರಲ್ಲಿ ತಿದ್ದುಪಡಿ ನಿಯಮ ರೂಪಿಸಿತು. ಈ ಕುರಿತಾಗಿ ಸರ್ಕಾರವು 2022ರ ಜು.18ರಂದು ಅಧಿಸೂಚನೆ ಹೊರಡಿಸಿತ್ತು.

high court
ಹೈಕೋರ್ಟ್​

By

Published : Apr 18, 2023, 10:52 PM IST

ಬೆಂಗಳೂರು: ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದಂತೆ ವ್ಯಾಜ್ಯಗಳ ಬಗ್ಗೆ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗೆ ವರ್ಗಾಯಿಸಿ ಜಾರಿಗೊಳಿಸಿದ್ದ ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ಅಧಿನಿಯಮಗಳು-2022 ಅನ್ನು ಹೈಕೋರ್ಟ್ ಅಸಾಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.

2022ರ ಜು.18ರಂದು ಸರ್ಕಾರಿ ಕರ್ನಾಟಕ ಜನನ ಮತ್ತು ಮರಣ (ತಿದ್ದುಪಡಿ) ಅಧಿನಿಯಮಗಳು- 2022 ಜಾರಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತು. ಇದನ್ನು ಪ್ರಶ್ನಿಸಿ ಬೀದರ್ ವಕೀಲರ ಸಂಘದ ಅಧ್ಯಕ್ಷ ಸುದರ್ಶನ ವಿ. ಬಿರಾದರ್ ಎಂಬುವರು ಅರ್ಜಿ ಸಲ್ಲಿಸಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಆದೇಶದಿಂದಾಗಿ ಈ ಹಿಂದಿನ ವ್ಯವಸ್ಥೆಯಂತೆ ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದಂತೆ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರ ಜೆಎಂಫ್‌ಸಿ ನ್ಯಾಯಾಲಯಗಳಿಗೆ ಹಿಂದಿರುಗಲಿದೆ. ಈ ತಿದ್ದುಪಡಿ ನಿಯಮಗಳು ಮೂಲಕಾಯ್ದೆಯ ವಿರುದ್ಧವಾಗಿದೆ. ಅದರಂತೆ ತಿದ್ದುಪಡಿ ನಿಯಮಗಳ ಮೂಲ ಕಾಯ್ದೆಗೆ ವಿರುದ್ಧವಾಗಿದೆ ಕಾನೂನು ಬಾಹಿರವಾಗಿದ್ದು ಅಸಿಂಧು ಗೊಳಿಸಬಹುದಾಗಿದೆ.

2022ರ ತಿದ್ದುಪಡಿ ನಿಯಮಗಳನ್ನು ರದ್ದುಪಡಿಸದಿದ್ದರೆ ಬಾಲವೇ ನಾಯಿಯನ್ನು ಅಲ್ಲಾಡಿಸಲು ಅವಕಾಶ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟು, ತಿದ್ದುಪಡಿ ನಿಯಮಗಳನ್ನು ರದ್ದುಪಡಿಸಿದೆ. ಜತೆಗೆ, ಅಧಿಸೂಚನೆಯ ನಂತರ ಕೈಗೊಂಡಿರುವ ಕ್ರಮಗಳು ಕಾನೂನಿನ ದೃಷ್ಟಿಯಲ್ಲಿ ಅನೂರ್ಜಿತವಾಗಲಿದೆ ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಇದನ್ನೂಓದಿ:ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹುಬ್ಬಳ್ಳಿ-ಧಾರವಾಡದಿಂದ ಶೆಟ್ಟರ್​, ಸಿಎಂ ಬೊಮ್ಮಾಯಿ ವಿರುದ್ಧ ಮೊಹಮ್ಮದ್ ಸವಣೂರು ಕಣಕ್ಕೆ

ಪ್ರಕರಣದ ಹಿನ್ನೆಲೆ:ಕೇಂದ್ರ ಸರ್ಕಾರದ ಜನನ-ಮರಣಗಳ ಕಾಯ್ದೆ-1969ರ ಸೆಕ್ಷನ್ 30ರ ಪ್ರಕಾರ ಜನನ-ಮರಣಗಳ ನೋಂದಣಿ ಕುರಿತ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಅಧಿಕಾರ ಜೆಎಂಎಫ್‌ಸಿ ನ್ಯಾಯಾಲಯ ಹೊಂದಿತು. ಆದರೆ ಅಧಿಕಾರವನ್ನು ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗಳಿಗೆ ವರ್ಗಾಯಿಸುವ ಸಂಬಂಧ ರಾಜ್ಯ ಸರ್ಕಾರ 2022ರಲ್ಲಿ ತಿದ್ದುಪಡಿ ನಿಯಮ ರೂಪಿಸಿತು.

ಜು.18ರಂದು ಅಧಿಸೂಚನೆ: ಅದರಂತೆ ಕರ್ನಾಟಕ ಜನನ-ಮರಣಗಳ ನೋಂದಣಿ (ತಿದ್ದುಪಡಿ) ಅಧಿಯಮಗಳು-2022 ಅನ್ನು ಜಾರಿಗೊಳಿಸಿ ರಾಜ್ಯ ಸರ್ಕಾರವು 2022ರ ಜು.18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ಮಂಡಿಸಿದ್ದ ಹಿರಿಯ ವಕೀಲ ಪಿ.ಪಿ.ಹೆಗ್ಡೆ, ಕೇಂದ್ರ ಸರ್ಕಾರದ ಜನನ ಮತ್ತು ಮರಣ ಕಾಯ್ದೆಗೆ ವಿರುದ್ಧವಾಗಿ ನಿಯಮಕ್ಕೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ ನ್ಯಾಯಾಲಯಗಳ ಅಧಿಕಾರ ಮೊಟಕುಗೊಳಿಸಿ ಉಪ ವಿಭಾಗಾಧಿಕಾರಿಗಳಿಗೆ ನೀಡಿದೆ. ಇದು ಕಾನೂನು ಬಾಹಿರ ಕ್ರಮ. ಮೂಲ ಕಾಯ್ದೆಯ ಪ್ರಕಾರ, ಜನನ ಮತ್ತು ಮರಣ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸುವ ಅಧಿಕಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಾತ್ರವಿದೆ. ಈ ರೀತಿ ತಿದ್ದುಪಡಿ ನಿಯಮ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾದ ಮಂಡಿಸಿದ್ದರು.

ಇದನ್ನೂಓದಿ: ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್​ ಏಕಸದಸ್ಯ ಪೀಠ ನೀಡಿದ್ದ ಆದೇಶ ಎತ್ತಿ ಹಿಡಿದ ದ್ವಿಸದಸ್ಯ ಪೀಠ

ABOUT THE AUTHOR

...view details