ಕರ್ನಾಟಕ

karnataka

ETV Bharat / state

ಅರಸು ಜಯಂತಿಗೆ ಸಿದ್ದರಾಮಯ್ಯ ಗೈರು: ಪರೋಕ್ಷವಾಗಿ ಟಾಂಗ್​ ಕೊಟ್ಟ ಹೆಚ್​.ಕೆ. ಪಾಟೀಲ್​ - ಕೆಪಿಸಿಸಿಯಿಂದ ರಾಜೀವ್ ಗಾಂಧಿ, ದೇವರಾಜ್ ಅರಸು ಜನ್ಮದಿನ

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮದಿನ ‌ಆಚರಿಸಲಾಯಿತು.

ಸರ್ಕಾರದ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ

By

Published : Aug 20, 2019, 10:08 PM IST

ಬೆಂಗಳೂರು : ನಗರದ ಅಂಬೇಡ್ಕರ್ ಭವನದಲ್ಲಿಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮದಿನ ‌ಆಚರಿಸಲಾಯಿತು .

ನಂತರ ಮಾತನಾಡಿದ ಮಾಜಿ ಸಚಿವ ಎಚ್ ಕೆ ಪಾಟೀಲ್ ಸರ್ಕಾರ ಇದ್ದಾಗ ಬರೋರು ಬೇರೆ ಇವತ್ತು ಕಾರ್ಯಕ್ರಮದಲ್ಲಿ ಉಳಿದವರು ಬೇರೆ ಎಂದು ಹೇಳುವ ಮೂಲಕ ಕಾರ್ಯಕ್ರಮಕ್ಕೆ ಗೈರಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ

ಸರ್ಕಾರದ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ
ಪರೋಕ್ಷವಾಗಿ ಟಾಂಗ್ ಕೊಟ್ಟರು. ಅಲ್ಲದೆ ಇದೇ ವೇಳೆ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಪ್ರಸ್ತಾಪ ಮಾಡಿ ಈಗ ಬಿಜೆಪಿ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಕೊಟ್ಟಿದ್ದಾರೆ. ನಿಸ್ಪಕ್ಷಪಾತವಾಗಿ ತನಿಖೆ ಮಾಡಲಿ. ಅದು ದ್ವೇಷದ ರಾಜಕಾರಣ ಮಾಡಿದರೆ ಸರಿಯೋಗಲ್ಲ‌ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಎಚ್ ಆಂಜನೇಯ ಮಾತನಾಡಿ ಸಾಮಾಜಿಕ ನ್ಯಾಯಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್, ಕಾಂಗ್ರೆಸ್ ನಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗುತ್ತೆ. ಸಿದ್ದರಾಮಯ್ಯ ಅವಧಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಜಾತಿಗಳಿಗೆ,ವರ್ಗದವರಿಗೆ ಸಿದ್ದರಾಮಯ್ಯ ಅವಧಿಯಲ್ಲಿ ಅವಕಾಶ ಸಿಕ್ಕಿತ್ತು. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಬಯಸಲು ಆಗೋದಿಲ್ಲ ಬಿಜೆಪಿಯವರು ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದ್ದಾರೆ. ಅಲ್ಲದೆ ಸಂಪುಟ ವಿಸ್ತರಣೆಗೆ 1ತಿಂಗಳು ತೆಗೆದುಕೊಂಡಿದ್ದಾರೆ. ಇನ್ನೂ ಖಾತೆ ಹಂಚಿಕೆಗೆ ಎಷ್ಟು ತಿಂಗಳು ತೆಗೆದುಕೊಳ್ತಾರೋ ನೋಡೋಣ ಎಂದು ಮಾಜಿ ಸಚಿವ ಆಂಜನೇಯ ಸರ್ಕಾರದ ವಿರುದ್ದ ವ್ಯಂಗ್ಯವಾಡಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ,ಹರಿಪ್ರಸಾದ್, ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ ಭಾಗಿಯಾಗಿದ್ದರು.

For All Latest Updates

TAGGED:

KPCC

ABOUT THE AUTHOR

...view details