ಕರ್ನಾಟಕ

karnataka

ETV Bharat / state

ಮಾಜಿ ಡಿಸಿಎಂ ಪರಮೇಶ್ವರ್​​​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸ್ವಪಕ್ಷ ನಾಯಕರು - Opposition leader Siddaramaiah

ಇಂದು 70ನೇ ವರ್ಷಕ್ಕೆ ಕಾಲಿರಿಸಿರುವ ಡಾ. ಜಿ. ಪರಮೇಶ್ವರ್​​​​ಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್​ ಸೇರಿದಂತೆ ಹಲವು ನಾಯಕರು ಶುಭಾಶಯ ಸಲ್ಲಿಸಿದ್ದಾರೆ

Birthday wishes from Congress leaders to former DCM Parameshwar
ಮಾಜಿ ಡಿಸಿಎಂ ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದ ಕಾಂಗ್ರೆಸ್ ನಾಯಕರು

By

Published : Aug 6, 2020, 12:46 PM IST

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ಜಿ. ಪರಮೇಶ್ವರ್​​ಗೆ ಕಾಂಗ್ರೆಸ್ ಮುಖಂಡರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದ ಕಾಂಗ್ರೆಸ್ ನಾಯಕರು

ಇಂದು 70ನೇ ವರ್ಷಕ್ಕೆ ಕಾಲಿರಿಸಿರುವ ಡಾ. ಜಿ. ಪರಮೇಶ್ವರ್​​​​ಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಎಂ. ಬಿ. ಪಾಟೀಲ್ ಮತ್ತಿತರ ನಾಯಕರು ಟ್ವೀಟ್ ಮಾಡುವ ಮೂಲಕ ಶುಭಾಶಯ ಸಲ್ಲಿಸಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದ ಕಾಂಗ್ರೆಸ್ ನಾಯಕರು

ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತಮ್ಮ ಟ್ವೀಟ್​​ನಲ್ಲಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ಡಾ. ಜಿ. ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭಾಶಯಗಳು. ನಾನು ಇವರ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್ ನಲ್ಲಿ, ಮಾಜಿ ಉಪ ಮುಖ್ಯಮಂತ್ರಿಗಳು, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಆತ್ಮೀಯರಾದ ಡಾ. ಜಿ. ಪರಮೇಶ್ವರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಗುರು ಬಸವಣ್ಣ ನಿಮಗೆ ಉತ್ತಮ ಆಯುರಾರೋಗ್ಯ ನೀಡಿ ಕರುಣಿಸಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದ ಕಾಂಗ್ರೆಸ್ ನಾಯಕರು

ಇದೇ ವೇಳೆ, ಕಾಂಗ್ರೆಸ್​ನ ವಿವಿಧ ನಾಯಕರು ಡಾ. ಜಿ. ಪರಮೇಶ್ವರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ ಮಾಡಿದ್ದಾರೆ.

ABOUT THE AUTHOR

...view details