ಕರ್ನಾಟಕ

karnataka

ETV Bharat / state

Bitcoin Scam: ಸರ್ಕಾರದ ವಿರುದ್ಧದ ಹೋರಾಟಕ್ಕೆ ಸಿಕ್ತು ಬಿಟ್‌ಕಾಯಿನ್‌ ಅಸ್ತ್ರ; ಕೈ ನಾಯಕರಿಂದ ಹೋಂವರ್ಕ್‌ - ಡಿಕೆ ಶಿವಕುಮಾರ್

ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿರುವ ದೊಡ್ಡ ಮೊತ್ತದ ಬಿಟ್‌ ಕಾಯಿನ್‌ ಹಗರಣವನ್ನು (Bitcoin) ಇದುವರೆಗೂ ಕಾಂಗ್ರೆಸ್ ಪಕ್ಷ ಆರೋಪಗಳಿಗೆ ಮಾತ್ರ ಬಳಸಿಕೊಳ್ಳುತ್ತಿದೆ. ಆದರೆ, ಬರುವ ಸೋಮವಾರದಿಂದ ಇದನ್ನು ದೊಡ್ಡ ಹೋರಾಟದ ರೂಪದಲ್ಲಿ ಕೈಗೆತ್ತಿಕೊಳ್ಳಲು ಕೈ ಪಕ್ಷ ತೀರ್ಮಾನಿಸಿದೆ.

ಸರ್ಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ
ಸರ್ಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ

By

Published : Nov 14, 2021, 7:14 AM IST

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ (Bitcoin Scam) ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ತೀವ್ರ ಸಂಚಲನ ಮೂಡಿಸುತ್ತಲೇ ಸಾಗುತ್ತಿದೆ. ಇದನ್ನು ಸರ್ಕಾರದ ವಿರುದ್ಧದ ಹೋರಾಟಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಪ್ರಬಲ ಅಸ್ತ್ರವಾಗಿ ಬಳಸುತ್ತಿದೆ.

ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿರುವ ದೊಡ್ಡ ಮೊತ್ತದ ಹಗರಣವನ್ನು ಇದುವರೆಗೂ ಕಾಂಗ್ರೆಸ್ ಪಕ್ಷ ಆರೋಪಗಳಿಗೆ ಮಾತ್ರ ಬಳಸಿಕೊಳ್ಳುತ್ತಿದ್ದು, ಬರುವ ಸೋಮವಾರದಿಂದ ಇದನ್ನು ದೊಡ್ಡ ಹೋರಾಟದ ರೂಪದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ.

ಸದ್ಯ ಕಾಂಗ್ರೆಸ್ ಪಕ್ಷದ ಕೆಲ ಪ್ರಾದೇಶಿಕ ನಾಯಕರು ಬಿಟ್ ಕಾಯಿನ್ ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (Karnataka Pradesh Congress Committee President D.K.Shivakumar) ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಆಕ್ರೋಶ, ವಾಗ್ದಾಳಿ ನಡೆಸಿದ್ದಾರೆ. ಒಂದೆಡೆ ಸಿದ್ದರಾಮಯ್ಯ ತಮ್ಮ ಆರೋಪದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಈ ಹಗರಣದಲ್ಲಿ ಶಾಮೀಲಾಗಿದ್ದಾರೇನೋ ಎನ್ನುವ ಅನುಮಾನ ಕಾಡುತ್ತಿದೆ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ನಾವು ಈ ಹಗರಣದ ಬಗ್ಗೆ ಹೋಂ ವರ್ಕ್ ಮಾಡುತ್ತಿದ್ದು, ಮುಂದಿನ ಹೋರಾಟದ ರೂಪುರೇಷೆ ಹೆಣೆಯುತ್ತಿದ್ದೇವೆ ಎಂದಿದ್ದಾರೆ.

ಪ್ರತಿಪಕ್ಷ ನಾಯಕರೂ ಸೇರಿದಂತೆ ಯಾವೊಬ್ಬ ನಾಯಕರ ವಾಗ್ದಾಳಿಗೆ ತಕ್ಷಣ ಪ್ರತಿಕ್ರಿಯೆ ನೀಡದೇ ಮೌನವಾಗಿ ಉಳಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಏಕಾಏಕಿ ಬಿಟ್​ ಕಾಯಿನ್ ವಿಚಾರವಾಗಿ ತಮ್ಮ ವಿರುದ್ಧ ಕೇಳಿ ಬಂದ ಆರೋಪಕ್ಕೆ ಪ್ರತ್ಯುತ್ತರ ನೀಡಲಾರಂಭಿಸಿದ್ದಾರೆ. ಅಲ್ಲದೇ ಪ್ರತಿಪಕ್ಷಗಳ ವಿರುದ್ಧ ಹರಿಹಾಯುತ್ತಿದ್ದಾರೆ. ಇದು ಸಹ ಸಹಜವಾಗಿ ಸಿಎಂ ಹಾಗೂ ಸರ್ಕಾರದ ಕೆಲ ನಾಯಕರ ವಿರುದ್ಧ ಅನುಮಾನ ಮೂಡಲು ಕಾರಣವಾಗಿದೆ.

ಮುಖಂಡರ ಆರೋಪ

ಒಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ. ನನಗೆ ಸಿಎಂ ಪ್ರತಿಕ್ರಿಯೆ, ಆಕ್ರೋಶ ನೋಡಿದರೆ ಅವರೇ ಶಾಮೀಲಾಗಿದ್ದಾರೇನೋ ಎನ್ನುವ ಅನುಮಾನ ಬರುತ್ತಿದೆ ಎಂದಿದ್ದಾರೆ. ಅಲ್ಲದೇ ಇದನ್ನು ಸೂಕ್ತ ತನಿಖೆಗೆ ವಹಿಸುವಂತೆಯೂ ಒತ್ತಾಯಿಸಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷರು ತನಿಖೆಯನ್ನು ಇಡಿಗೆ ವಹಿಸಲಾಗಿದೆ. ಆದರೆ ಅಲ್ಲಿ ಯಾವ ಕಾರಣ, ಮಾಹಿತಿ ನೀಡಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala, General Secretary, Indian National Congress) ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, 5240 ಕೋಟಿ ರೂ. ಮೊತ್ತದ ದೊಡ್ಡ ಹಗರಣ ಇದಾಗಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದ ಸಮಿತಿ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ, ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧವೂ ವಾಗ್ದಾಳಿ ನಡೆಸಿರುವ ಅವರು, ಇಷ್ಟು ದೊಡ್ಡ ಹಗರಣವನ್ನು ಸೂಕ್ತ ತನಿಖೆಗೆ ಒಳಪಡಿಸುವ ಬದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ, ಈ ಕುರಿತ ಆರೋಪ ನಿರ್ಲಕ್ಷಿಸಿ ಎಂದು ಹೇಳಿ ಕಳುಹಿಸುವ ಮೂಲಕ ದೊಡ್ಡ ತಪ್ಪು ಮಾಡಿದ್ದಾರೆ ಎಂದು ಸುರ್ಜೇವಾಲಾ ಆರೋಪಿಸಿದ್ದಾರೆ.

ಒಟ್ಟಾರೆ ಬಿಟ್ ಕಾಯಿನ್ ಹಗರಣದಲ್ಲಿ ಯಾರ್ಯಾರು ಶಾಮೀಲಾಗಿದ್ದಾರೆ, ಯಾರನ್ನು ಕಾಪಾಡುವ ಕಾರ್ಯ ನಡೆಯುತ್ತಿದೆ ಎನ್ನುವ ಗೊಂದಲ ಇರುವ ಮಧ್ಯೆಯೇ ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಇದು ಕಂಟಕವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಮತ್ತೊಮ್ಮೆ ಐದು ವರ್ಷದ ಅವಧಿಯಲ್ಲಿ ಮೂರು ಮಂದಿ ಸಿಎಂಗಳನ್ನು ಕಂಡ ಕುಖ್ಯಾತಿಗೆ ಬಿಜೆಪಿ ಒಳಗಾಗಲಿದೆ ಎಂಬ ಅನುಮಾನ ಮೂಡುತ್ತಿದೆ.

ಇತ್ತ ಬಿಜೆಪಿ ಸುಭದ್ರ ಸರ್ಕಾರ ನೀಡಲು ವಿಫಲವಾಗಿದೆ ಎಂಬುದನ್ನು ತೋರಿಸುವ ಮೂಲಕ 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷಕ್ಕೆ ಲಭಿಸಿರುವ ಸುವರ್ಣಾವಕಾಶ ಇದಾಗಿದ್ದು, ಇದನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ತಜ್ಞರ ಜತೆ ಚರ್ಚಿಸುತ್ತಿದ್ದಾರೆ. ಇದನ್ನೇ ಡಿಕೆಶಿ ಇಂದು “ನಾವು ಹೋಂವರ್ಕ್ ಮಾಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bitcoin Case: ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಇಲಿಯನ್ನು ಬೆಟ್ಟ ಮಾಡಬೇಡಿ: ಕಾಂಗ್ರೆಸ್​ ವಿರುದ್ಧ ಸುಧಾಕರ್ ಕಿಡಿ

ABOUT THE AUTHOR

...view details