ಕರ್ನಾಟಕ

karnataka

ETV Bharat / state

ಬೆಳಗಾವಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ - ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಭವನ ಮುತ್ತಿಗೆ

ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ವೇಳೆ ಈ ರೀತಿ ಭದ್ರತಾ ಲೋಪ ಮಾಡಿರುವುದು ಇಡೀ ದೇಶಕ್ಕೆ ಅವಮಾನಕರ ಸಂಗತಿ. ಇದರ ನೈತಿಕ ಹೊಣೆ ಹೊತ್ತು ಪಂಜಾಬ್ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕಿ ಉಜ್ವಲಾ ಬಡವನಾಚೆ ಒತ್ತಾಯಿಸಿದ್ದಾರೆ.

bjp-activists-attack-congress-house-in-belgaum
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಭವನ ಮುತ್ತಿಗೆ

By

Published : Jan 6, 2022, 9:41 PM IST

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ವೇಳೆ ಪಂಜಾಬ್‍ನಲ್ಲಾದ ಭದ್ರತಾ ಲೋಪ ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.


ಚೆನ್ನಮ್ಮ ವೃತ್ತದಿಂದ ಕಾಂಗ್ರೆಸ್ ಭವನದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯ ಅಣಕು ಶವಯಾತ್ರೆ ಮಾಡಿದರು.

ಪೂರ್ವನಿಯೋಜಿತವಾಗಿ ಕಾಂಗ್ರೆಸ್ ಕಚೇರಿ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರು ಕಾಂಗ್ರೆಸ್ ಭವನದತ್ತ ಬರುತ್ತಿದ್ದಂತೆ ರಸ್ತೆ ಮಧ್ಯದಲ್ಲಿಯೇ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗು ಬಿಜೆಪಿ ಕಾರ್ಯಕರ್ತರ ನಡುವೆ ನೂಕುನುಗ್ಗಲು ಉಂಟಾಯಿತು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ABOUT THE AUTHOR

...view details