ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ವರುಣನಾರ್ಭಟ: ಬಿಜೆಪಿ ಸಾಂಕೇತಿಕ ಪ್ರತಿಭಟನೆ...ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿ! ​ - ಪ್ರತಿಭಟನೆ

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಕಾಂಗ್ರೆಸ್ ಕೈಗೊಂಡಿದ್ದ ಪ್ರತಿಭಟನೆಗೆ ಮಳೆ ಅಡ್ಡಿಯಾಗಿದೆ. ಇತ್ತ 10 ಕೆ.ಜಿ ಅಕ್ಕಿ ವಿತರಿಸಬೇಕೆಂದು ಆಗ್ರಹಿಸಿ ಬೆಂಗಳೂರು ಸೇರಿ 10 ವಿಭಾಗ ಕೇಂದ್ರಗಳಲ್ಲಿ ಬಿಜೆಪಿ ನಡೆಸಲುದ್ದೇಶಿದ್ದ ಪ್ರತಿಭಟನೆಯನ್ನು ಭಾರಿ ಮಳೆ ಹಿನ್ನೆಲೆ ಸಾಂಕೇತಿಕ ಪ್ರತಿಭಟನೆ ಮಾಡಿ, ಬಳಿಕ ಸ್ಥಗಿತಗೊಳಿಸಿದ್ದಾರೆ.

Representative image
ಬೆಂಗಳೂರಿನಲ್ಲಿ ವರುಣಾರ್ಭಟ: ಬಿಜೆಪಿ, ಕಾಂಗ್ರೆಸ್​ ಪ್ರತಿಭಟನೆ ರದ್ದು

By

Published : Jun 20, 2023, 11:25 AM IST

Updated : Jun 20, 2023, 11:36 AM IST

ಬೆಂಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ 10 ಕೆ.ಜಿ ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಸೇರಿ 10 ವಿಭಾಗ ಕೇಂದ್ರಗಳಲ್ಲಿ ಬಿಜೆಪಿ ನಡೆಸಲುದ್ದೇಶಿದ್ದ ಪ್ರತಿಭಟನೆಯನ್ನು ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಮಾತ್ರ ಮಾಡಲಾಗಿದೆ.

ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಹಿರಿಯ ನಾಯಕರ ಸಭೆ ನಡೆಸಿ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದ್ದು, ಅದರಂತೆ ಇಂದು ಬೆಂಗಳೂರು ಸೇರಿ 10 ವಿಭಾಗದಲ್ಲಿ ಬಿಜೆಪಿ ಪ್ರತಿಭಟನೆ ಆಯೋಜನೆ ಮಾಡಿದೆ. ಈ ಬಗ್ಗೆ ಪಕ್ಷದ ಎಲ್ಲ ಜಿಲ್ಲಾ ಅಧ್ಯಕ್ಷರಿಗೆ ಹಾಗೂ ಮಾಜಿ ಸಚಿವರಿಗೆ ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

ಬೆಂಗಳೂರಲ್ಲಿ ಮಾತ್ರ ರದ್ದು:ಸಂಸದರು ಮತ್ತು ಶಾಸಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಬೆಂಗಳೂರು ಹೋರಾಟ ಮಾತ್ರ ಸ್ಥಗಿತವಾಗಿದ್ದು, ಸಾಂಕೇತಿಕವಾಗಿ ಮಾತ್ರ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರ್.ಅಶೋಕ್​ ಸೇರಿ ಪ್ರಮುಖ ನಾಯಕರು ಭಾಗಿಯಾಗಬೇಕಿದ್ದ ಪ್ರತಿಭಟನೆ ಮಾತ್ರ ರದ್ದಾಗಿದೆ. ಇತರ ಕಡೆ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಪ್ರತಿಭಟನೆ, ಎಲ್ಲರೂ ಪಾಲ್ಗೊಳ್ಳುವಂತೆ ಬಿಜೆಪಿ ವ್ಯಂಗ್ಯ

ಜು.4 ರಂದು ಪ್ರತಿಭಟನೆ: ವಿದ್ಯುತ್ ಬಿಲ್ ಹೆಚ್ಚಳ, ಠೇವಣಿ ಹೆಚ್ಚಳ, ಲೋಡ್ ಶೆಡ್ಡಿಂಗ್, ಪಠ್ಯಪುಸ್ತಕ ಏಕಾಏಕಿ ಬದಲಾವಣೆ, ಮತಾಂತರ ನಿಷೇಧ ಕಾಯ್ದೆ ರದ್ದು ಪ್ರಸ್ತಾಪ, ಗೋ ಹತ್ಯೆ ನಿಷೇಧ ಕಾಯ್ದೆ ಹಿಂದೆಗೆತವನ್ನು ವಿರೋಧಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 4ರಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ‌.

'ಹೇಳಿದ್ದೇನು? ಮಾಡಿದ್ದೇನು'? ಹೋರಾಟ ಇದಾಗಲಿದೆ. ಎಲ್ಲವೂ ಉಚಿತ ಎಂದಿದ್ದ ಕಾಂಗ್ರೆಸ್ಸಿಗರು ಈಗ ಕಂಡಿಷನ್‍ಗಳನ್ನು ಹಾಕುತ್ತಿದ್ದಾರೆ. ಕೆಲವಂತೂ ಅನುಷ್ಠಾನಕ್ಕೆ ಸಾಧ್ಯವಿಲ್ಲದ ಕಂಡಿಷನ್ ಹಾಕಿದ್ದಾರೆ. ಹಿಂದೆ ಎಲ್ಲ ನಿರುದ್ಯೋಗಿ ಪದವೀಧರ ಯುವಕರಿಗೆ 3 ಸಾವಿರ, ಡಿಪ್ಲೊಮಾ ಪಡೆದು ನಿರುದ್ಯೋಗಿ ಆಗಿರುವವರಿಗೆ 1,500 ರೂ. ಕೊಡುವುದಾಗಿ ತಿಳಿಸಿದ್ದರು. ಈಗ 2022-23ರಲ್ಲಿ ಪದವಿ, ಡಿಪ್ಲೊಮಾ ಪಡೆದು ಆರು ತಿಂಗಳ ಪ್ರಯತ್ನದ ಬಳಿಕವೂ ಉದ್ಯೋಗ ಲಭಿಸದವರು ಎಂದು ಕಂಡಿಷನ್ ಹಾಕುತ್ತಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷಗಳಿಂದ ಉದ್ಯೋಗ ಸಿಗದೆ ನೊಂದವರು ನಿರುದ್ಯೋಗಿ ಯುವ ಜನರು. ಈಗ ಪಾಸಾದವರಲ್ಲ. ಈಗ ಪಾಸಾದವರಿಗೂ ಕೊಡಲಿ. ನಮ್ಮ ಅಭ್ಯಂತರ ಏನಿಲ್ಲ. ವಾಸ್ತವವಾಗಿ ನೊಂದವರಿಗೆ ಕೊಡಬೇಕಿತ್ತು. ಇದು ಹಣೆಗೆ ತುಪ್ಪ ಸವರುವ ಕಾರ್ಯ. ಮೂಗಿಗೆ ತುಪ್ಪ ಸವರಿದರೆ ಪ್ರಯತ್ನ ಮಾಡಬಹುದು. ಆ ತರದ ಒಂದು ಯೋಜನೆ. ಇದರ ವಿರುದ್ಧ 'ಹೇಳಿದ್ದೇನು? ಮಾಡಿದ್ದೇನು'? ನುಡಿದಂತೆ ನಡೆಯದ ಕಾಂಗ್ರೆಸ್ ಸರ್ಕಾರ ಎಂಬ ಹೋರಾಟವನ್ನು ಜಿಲ್ಲಾ ಕೇಂದ್ರ ಮತ್ತು ವಿಧಾನಸಭೆಯ ಒಳಗಡೆ ನಡೆಸಲಿದೆ.

ಜೈಲ್ ಭರೋ ಚಳವಳಿ:ಮತಾಂತರ ನಿಷೇಧ ಕಾಯ್ದೆ ಹಿಂದೆಗೆತವನ್ನು ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಹೋರಾಟವನ್ನು ರೂಪಿಸುತ್ತಿದೆ. ವಿಧಾನಸಭೆ ಒಳಗಡೆಯೂ ದೊಡ್ಡ ರೀತಿಯ ಹೋರಾಟ ಮಾಡಲು ನಿರ್ಧರಿಸಿದೆ. ಕಾಂಗ್ರೆಸ್ ಆಡಳಿತ ಮಂಡಿಸುವ ಬಿಲ್ ಆಧರಿಸಿ ಹೋರಾಟದ ದಿನಾಂಕವನ್ನು ಪ್ರಕಟಿಸಲು ನಿರ್ಧರಿಸಿದೆ. ರಾಜ್ಯದ ಜನರನ್ನು ಒಳಗೊಂಡು ಜೈಲ್ ಭರೋ ಅಥವಾ ಇನ್ಯಾವುದಾದರೂ ದೊಡ್ಡ ಹೋರಾಟ ನಡೆಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್​ ಪ್ರತಿಭಟನೆಗೆ ಮಳೆ ಅಡ್ಡಿ:ಇನ್ನುರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಕಾಂಗ್ರೆಸ್ ಕೈಗೊಂಡಿದ್ದ ಪ್ರತಿಭಟನೆಗೆ ಮಳೆರಾಯ ಅಡ್ಡಿಯಾಗಿದ್ದಾನೆ. ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು 9 ಗಂಟೆ ಸಮಯಕ್ಕೆ ಮಳೆ ಆರಂಭವಾಗಿದೆ. ಬೆಂಗಳೂರಿನಾದ್ಯಂತ ನಿಧಾನವಾಗಿ ಆರಂಭವಾದ ಮಳೆ ಈ ಭಾಗದಲ್ಲಿ ಹೆಚ್ಚಾಗಿ ಅಬ್ಬರಿಸುತ್ತಿದೆ.

ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದ್ದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಕಾಂಗ್ರೆಸ್ ಪ್ರತಿಭಟನೆಗೆ ಮಳೆಯ ಅಡ್ಡಿ ಎದುರಾಗಿದೆ. ಫ್ರಿಡಂ ಪಾರ್ಕ್​ನಲ್ಲಿ ಹಾಕಿದ್ದ ಶಾಮಿಯಾನ, ವೇದಿಕೆ, ಚೇರ್ ಎಲ್ಲವೂ ಮಳೆ ನೀರಿನಿಂದ ಸಂಪೂರ್ಣ ಒದ್ದೆಯಾಗಿದೆ.

ಕಾಂಗ್ರೆಸ್ ಪ್ರತಿಭಟನೆಗೆ ವೇದಿಕೆ ಸಿದ್ದಪಡಿಸಲಾಗಿತ್ತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದಲೇ ಇಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ಎಲ್ಲಾ ಶಾಸಕರು, ಸಚಿವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪ್ರತಿಭಟನೆಗೆ ಕರೆ ಕೊಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿ ಏಕಕಾಲಕ್ಕೆ ಬೃಹತ್ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.

ರದ್ದಾಗುವ ಸಾಧ್ಯತೆ ಹೆಚ್ಚು:ಇಂದು ನಡೆಸಬೇಕಿರುವ ಪ್ರತಿಭಟನೆ ಮಳೆ ಹಿನ್ನೆಲೆ ರದ್ದುಗೊಳಿಸಿ ಬೇರೆ ದಿನ ನಿಗದಿಪಡಿಸುವ ಸಾಧ್ಯತೆ ಹೆಚ್ಚಿದೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಆರಂಭವಾಗಿ 12ರ ಒಳಗೆ ಮುಗಿಸಿ ಡಿಸಿಎಂ ಹಾಗೂ ಸಿಎಂ ವಿಧಾನಸೌಧಕ್ಕೆ ತೆರಳಿ ವಿಧಾನ ಪರಿಷತ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿದೆ. ಈ ಹಿನ್ನಲೆ ಪ್ರತಿಭಟನೆ ನಡೆಸುವ ಅವಕಾಶಗಳು ಕಡಿಮೆ ಇದ್ದು ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ:ನಾಳೆ ವಿಭಾಗ ಕೇಂದ್ರಗಳಲ್ಲಿ ಬಿಜೆಪಿ ಹೋರಾಟ; ಜುಲೈ 4ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಸಿದ್ಧತೆ

Last Updated : Jun 20, 2023, 11:36 AM IST

ABOUT THE AUTHOR

...view details