ಬೆಂಗಳೂರು:ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ದೇಶಾದ್ಯಂತ ನಡೆಯುತ್ತಿರುವ ಹರ್ ಘರ್ ತಿರಂಗಾ ಅಭಿಯಾನದ ಯಶಸ್ಸಿಗೆ ಸಂಕಲ್ಪ ತೊಟ್ಟಿರುವ ರಾಜ್ಯ ಬಿಜೆಪಿ ನಾಯಕರು, ಗಣ್ಯರು, ಸೆಲೆಬ್ರೆಟಿಗಳ ಮನೆಗಳಿಗೆ ತೆರಳಿ ಧ್ವಜ ನೀಡುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳಲು ಮನವಿ ಮಾಡುತ್ತಿದ್ದಾರೆ. ಜೆ ಪಿ ನಗರದಲ್ಲಿರುವ ನಟ ಕಿಚ್ಚ ಸುದೀಪ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಭೇಟಿ ನೀಡಿ, ತ್ರಿವರ್ಣ ಧ್ವಜ ನೀಡುವ ಮೂಲಕ ಅಭಿಯಾನಕ್ಕೆ ಆಹ್ವಾನಿಸಿದೆ.
ಆಗಸ್ಟ್ 13 ರಿಂದ 15ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸುವ ಅಭಿಯಾನ ಆಯೋಜಿಸಲಾಗಿದೆ. ನಿಮ್ಮ ನಿವಾಸದಲ್ಲೂ ತ್ರಿವರ್ಣ ಧ್ವಜ ಹಾರಿಸಬೇಕು ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸುದೀಪ್, ಗೌರವಪೂರ್ವಕವಾಗಿ ರಾಷ್ಟ್ರಧ್ವಜ ಸ್ವೀಕರಿಸಿದರು. ತಮ್ಮ ನಿವಾಸದಲ್ಲಿಯೂ ರಾಷ್ಟ್ರ ಧ್ವಜಾರೋಹಣ ಮಾಡುವ ಭರವಸೆ ನೀಡಿದರು.