ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಸಿಡಿ ವಿಚಾರ ಸಂಬಂಧ ಹಾಲಿ ಹೈಕೋರ್ಟ್ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ಆಗಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಬಿಜೆಪಿ ಬ್ಲ್ಯಾಕ್ ಮೇಲರ್ಸ್ ಪಾರ್ಟಿ: ಬಿಎಸ್ವೈ ಸಿಡಿ ವಿಷಯ ತನಿಖೆಯಾಗಲಿ ಎಂದ ಡಿಕೆಶಿ
ಸಿಎಂ ಬಿ.ಎಸ್.ಯಡಿಯೂರಪ್ಪ ಸಿಡಿ ವಿಚಾರ ಗೃಹ ಇಲಾಖೆ ತನಿಖೆಗೆ ವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪ ಅರಮನೆ ಮೈದಾನದ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ಸರ್ವನಾಶ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ ಮುಕ್ತ ಮಾಡಲು ಏಳು ಜನ್ಮ ಎತ್ತಿ ಬಂದರೂ ರಾಜ್ಯ, ದೇಶದಲ್ಲಿ ನಮ್ಮ ಪಕ್ಷ ನಾಶ ಮಾಡಲು ಸಾಧ್ಯವಿಲ್ಲ. ಬಿಜೆಪಿ ಪಕ್ಷದ ಪ್ರಮುಖ ನಾಯಕರ ಮೂಲ ಕಾಂಗ್ರೆಸ್, ನಾವು ಕೊಟ್ಟ ಬುನಾದಿ ಮೇಲೆ ಕೇಂದ್ರ, ರಾಜ್ಯದಲ್ಲಿ ನಿಮ್ಮ ಸರ್ಕಾರ ನಡೆಯುತ್ತಿದೆ. ಸರ್ಕಾರ ಸಂಪುಟ ವಿಸ್ತರಣೆ ನಿನ್ನೆ ಆಗಿದೆ. ನಿಮ್ಮ ನಾಯಕರೇ ಬ್ಲಾಕ್ ಮೇಲರ್ಸ್ ಪಾರ್ಟಿ ಎಂದಿದ್ದಾರೆ. ಸಚಿವ ಸ್ಥಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಇಬ್ಬರು ಕ್ಯಾಬಿನೆಟ್ ಸೇರಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಜ.20ರಂದು ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ರೈತರು ದೇಶಾದ್ಯಂತ ಹೋರಾಟ ಮಾಡುತ್ತಿರುವ ವಿಚಾರ ತಿಳಿದಿದೆ. ಸುಪ್ರೀಂಕೋರ್ಟ್ ಸಹ ತಾತ್ಕಾಲಿಕ ತಡೆ ನೀಡಿ ರೈತರ ಹೋರಾಟದ ಕಾಳಜಿ ವ್ಯಕ್ತಪಡಿಸಿದೆ. ನಾವು ಕಾಂಗ್ರೆಸ್ ಪಕ್ಷದ ಪರವಾಗಿ ಸಾಕಷ್ಟು ಹೋರಾಟ ನಡೆಸಿದ್ದೇವೆ. ನಮ್ಮ ರಾಷ್ಟ್ರೀಯ ನಾಯಕರು ನ.15 ರಂದು ಎಲ್ಲಾ ರಾಜ್ಯದಲ್ಲಿ ರಾಜಭವನ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದ್ದಾರೆ.ಕೊರೊನಾ ಸಂದರ್ಭದಲ್ಲಿ ಸರ್ಕಾರ ಸೂಕ್ತ ರೀತಿಯಲ್ಲಿ ರೈತರ, ಜನರ ಸಹಾಯಕ್ಕೆ ಮುಂದಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.