ಬೆಂಗಳೂರು: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ತಿಮ್ಮಪ್ಪನ ಮೊರೆ ಹೋಗಿದ್ದಾರೆ.
ತಿಮ್ಮಪ್ಪನ ಮೊರೆಹೋದ ಬಿಜೆಪಿ ಅಭ್ಯರ್ಥಿ ಮುನಿರತ್ನ - ತಿಮ್ಮಪ್ಪನ ಮೊರೆಹೋದ ಬಿಜೆಪಿ ಅಭ್ಯರ್ಥಿ ಮುನಿರತ್ನ
ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುನಿರತ್ನ ಬಾಲಾಜಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
![ತಿಮ್ಮಪ್ಪನ ಮೊರೆಹೋದ ಬಿಜೆಪಿ ಅಭ್ಯರ್ಥಿ ಮುನಿರತ್ನ BJP candidate Munirathna visited the Tirumala Tirupati Temple](https://etvbharatimages.akamaized.net/etvbharat/prod-images/768-512-9410581-697-9410581-1604376913132.jpg)
ತಿಮ್ಮಪ್ಪನ ಮೊರೆಹೋದ ಬಿಜೆಪಿ ಅಭ್ಯರ್ಥಿ ಮುನಿರತ್ನ
ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುನಿರತ್ನ ಬಾಲಾಜಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಮತದಾನದ ಸ್ಥಳಗಳಿಗೆ ಭೇಟಿ ನೀಡುವ ಮೊದಲು ದೇವರಿಗೆ ಪ್ರಾರ್ಥನೆ ಸಲ್ಲಿಸಿ, ತಿಮ್ಮಪ್ಪನ ಆಶೀರ್ವಾದ ಪಡೆದರು.
ನಂತರ ಆರ್.ಆರ್.ನಗರ ಕ್ಷೇತ್ರದ ಮತದಾನ ವೀಕ್ಷಣೆಗೆ ತೆರಳಿದರು. ಯಶವಂತಪುರದಿಂದ ಆರಂಭಿಸಿ ವಿವಿಧ ವಾರ್ಡ್ ಮತಗಟ್ಟೆಗಳಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭೇಟಿ ನೀಡಲಿದ್ದಾರೆ.