ಕರ್ನಾಟಕ

karnataka

ETV Bharat / state

ಉಪಕದನ: ಕಮಲ ನಾಯಕರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮುನಿರತ್ನ - Covid Protocol

ರಾಜ ರಾಜೇಶ್ವರಿನಗರ ಉಪಚುನಾವಣೆ ಹಿನ್ನೆಲೆ ಇಂದೇ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಜೆಡಿಎಸ್​​​ನ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಮುಂದಾಗಲಿದ್ದಾರೆ.

bjp-candidate-munirats filled-nomination
ಉಪಕದನ: ಕಮಲ ನಾಯಕರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮುನಿರತ್ನ

By

Published : Oct 14, 2020, 12:24 PM IST

Updated : Oct 14, 2020, 12:32 PM IST

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್​​​ ನಾರಾಯಣ್ ಹಾಗೂ ಸಚಿವ ಆರ್ ಅಶೋಕ್ ಅವರೊಂದಿಗೆ ಆಗಮಿಸಿದ ಮುನಿರತ್ನ ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಜೆಡಿಎಸ್​​​ನ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ

ಇವರೊಂದಿಗೆ ನೂರಾರು ಕಾರ್ಯಕರ್ತರು ಕೂಡ ನಾಮಪತ್ರ ಸಲ್ಲಿಕೆ ಕೇಂದ್ರದತ್ತ ಮೆರವಣಿಗೆಯಲ್ಲಿ ಆಗಮಿಸಿದ್ದು, ಕೋವಿಡ್ ನಿಯಮಾವಳಿಗಳ ಹಿನ್ನೆಲೆ ಇವರನ್ನು ನಾಮಪತ್ರ ಸಲ್ಲಿಕೆ ಕೇಂದ್ರದಿಂದ 100 ಮೀಟರ್ ದೂರದಲ್ಲಿ ತಡೆಯಲಾಗಿದೆ. ಕೇಂದ್ರದೊಳಗೆ ಕೇವಲ ಅಭ್ಯರ್ಥಿಯ ಜೊತೆ ಇಬ್ಬರು ನಾಯಕರನ್ನು ಮಾತ್ರ ಬಿಡಲಾಗಿದೆ.

ಜೆಡಿಎಸ್ ಅಭ್ಯರ್ಥಿ ನಾಮಪತ್ರ

ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ನಾಯಕರಾದ ಪ್ರಕಾಶ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Last Updated : Oct 14, 2020, 12:32 PM IST

ABOUT THE AUTHOR

...view details