ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು.. ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ 2228 ಮೊದಲ ಪ್ರಾಶಸ್ತ್ಯದ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7335 ಮತ ಗಳಿಕೆ ಮಾಡಿದ್ದು, ಜೆಡಿಎಸ್ನ ಎಪಿ ರಂಗನಾಥ್ 5107 ಮತಗಳಿಸಿದ್ದಾರೆ. ಕಾಂಗ್ರೆಸ್ನ ಪ್ರವೀಣ್ ಪೀಟರ್ 782 ಮತಗಳಿಕೆ ಮಾಡಿದ್ದಾರೆ.
ಗೆಲುವು ಸಾಧಿಸುತ್ತಿದ್ದ ಹಾಗೇ ಪುಟ್ಟಣ್ಣ ಎಣಿಕೆ ಕೇಂದ್ರಕ್ಕೆ ಆಗಮಿಸಿದರು. ಈ ವೇಳೆ ಬೆಂಬಲಿಗರು ಪುಟ್ಟಣ್ಣ ಪರ ಜಯಘೋಷ ಕೂಗಿದರು. ಬಳಿಕ ಮಾತನಾಡಿದ ಅವರು, ನಾನು ನಾಲ್ಕನೇ ಸಲ ಗೆದ್ದಿದ್ದೇನೆ, ಮೋದಿಯವರು, ಅಮಿತ್ ಶಾ ಅವರು, ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿಯ ಎಲ್ಲ ನಾಯಕರು, ಕಾರ್ಯಕರ್ತರಿಗೆ ಮತ್ತು ನನ್ನ ಶಿಕ್ಷಕ ವೃಂದಕ್ಕೆ ವಿಶೇಷ ಅಭಿನಂದನೆ ಸಲ್ಲಿಸಿದರು.
ಶಿಕ್ಷಕ ವೃಂದದ ಪರ ನಾನು ಹೋರಾಟ ಮುಂದುವರಿಸುತ್ತೇನೆ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮುಂದುವರಿಸುತ್ತೇನೆ ಎಂದು ತಿಳಿಸಿದರು.