ಕರ್ನಾಟಕ

karnataka

ETV Bharat / state

ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಬಿಜೆಪಿ ದೂರು

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ನಾಮಪತ್ರ ಎರಡೆರಡು ಬಾರಿ ತಿದ್ದುಪಡಿ ಮಾಡಿದ ಆರೋಪ- ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು-ಬಿಜೆಪಿ ವಕ್ತಾರ ಗೋ.ಮಧುಸೂದನ್ ನಿಯೋಗದಿಂದ ಚುನಾವಣಾಧಿಕಾರಿಗೆ ದೂರು

ಗೋ.ಮಧುಸೂದನ್

By

Published : Apr 3, 2019, 10:43 PM IST

ಬೆಂಗಳೂರು: ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ.

ಬಿಜೆಪಿ ವಕ್ತಾರ ಗೋ.ಮಧುಸೂದನ್ ನಿಯೋಗ ಚುನಾವಣಾಧಿಕಾರಿಗೆ ದೂರು ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೋ.ಮಧುಸೂದನ್ ಅವರು, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ನಾಮಪತ್ರವನ್ನು ಎರಡೆರಡು ಬಾರಿ ತಿದ್ದುಪಡಿ ಮಾಡಿಕೊಂಡು ಬರಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ವಕ್ತಾರ ಗೋ.ಮಧುಸೂದನ್

ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಸುಮಲತಾ ಅವರ ಏಜೆಂಟ್ ಮದನ್​ಗೆ ಲಿಖಿತ ದೂರು ಸಲ್ಲಿಸುವಂತೆ ಹೇಳಿದ್ದರು. ಅವರು ದೂರು ಬರೆದು ಸಲ್ಲಿಸುವಷ್ಟರಲ್ಲಿ ನಿಖಿಲ್ ನಾಮಪತ್ರ ಅಂಗೀಕರಿಸಿದ್ದಾರೆ. ನಾಮಪತ್ರ ಪರಿಶೀಲನೆಯ ಸಂದರ್ಭದ ವಿಡಿಯೋ ದೃಶ್ಯಾವಳಿ ಕೊಡುವ ವಿಷಯದಲ್ಲೂ ನಿರ್ಲಕ್ಷ್ಯ ತೋರಿಸಿದ್ದಾರೆ‌ ಎಂದು ದೂರಿದರು.

ಮಂಡ್ಯದಲ್ಲಿ ಇವರಿಂದ ಪಾರದರ್ಶಕವಾದ ನ್ಯಾಯ ಸಮ್ಮತ ಚುನಾವಣೆ ನಿರೀಕ್ಷೆ ಇಲ್ಲ. ಹಾಗಾಗಿ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಹಾಗೂ ವೀಕ್ಷಕ ರಂಜೀತ್ ಕುಮಾರ್ ಅವರನ್ನು ಬದಲಾವಣೆ ಮಾಡಲು ಒತ್ತಾಯಿಸಿದ್ದೇವೆ ಎಂದು ಮಧೂಸೂದನ್​ ಹೇಳಿದರು.

ಈಗಾಗಲೇ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ತನಿಖಾ ವರದಿ ಸಲ್ಲಿಸಿದ್ದೇವೆ. ಅವರೂ ಸಹ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಭರವಸೆ ನೀಡಿದ್ದಾರೆ ಎಂದು ಗೋ.ಮಧುಸೂದನ್ ತಿಳಿಸಿದರು.

For All Latest Updates

TAGGED:

ABOUT THE AUTHOR

...view details