ಬೆಂಗಳೂರು:ಇತ್ತೀಚಿನ ಕೆಲ ದಿನಗಳಲ್ಲಿ ನಡೆದಿರುವ ವಿದ್ಯಮಾಗಳು ಬಿಜೆಪಿ ಮೇಲೆ ನಕಾರಾತ್ಮಕ ಪರಿಣಾಮ ಬೀರಿವೆ ಎನ್ನಲಾಗ್ತಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನುವ ಮಾಹಿತಿ ಹಿನ್ನೆಲೆ ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯ ತುರ್ತು ಸಭೆ ಕರೆಯಲಾಗಿದೆ.
ನಾಳೆಯಿಂದ ರಾಜ್ಯ ಬಿಜೆಪಿ ನಾಯಕರು ದಿಢೀರ್ ಸರಣಿ ಸಭೆ ಆರಂಭಿಸುತ್ತಿದ್ದಾರೆ. ಬುಧವಾರ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದೆ.
ಬೆಳಗ್ಗೆಯಿಂದ ಸಂಜೆಯವರೆಗೆ ದಕ್ಷಿಣ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಎಲ್ಲಾ 8 ಕ್ಷೇತ್ರಗಳ ಸಭೆ ಬಳಿಕ ರಾಜ್ಯ ಬಿಜೆಪಿ ಕೋರ್ ಕಮಿಟಿ ತುರ್ತು ಸಭೆ ಜರುಗಲಿದೆ.