ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ನಡೆದಿರುವ ಚಟುವಟಿಕೆಗಳ ವಿವರ ನೀಡಿತು.
ಸಿಎಂ ಬಿಎಸ್ವೈ ಭೇಟಿಯಾದ ಬಿಜೆಪಿ ನಿಯೋಗ - ಬಿಜೆಪಿ ನಿಯೋಗ
ಬಿಜೆಪಿ ನಿಯೋಗದಿಂದ ಸರ್ಕಾರ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕಾರ್ಯ ಯೋಜನೆಗಳ ಕುರಿತು ಸಿಎಂಗೆ ಮಾಹಿತಿ ನೀಡಲಾಗಿದೆ.
ಸಿಎಂ ಭೇಟಿಯಾದ ಬಿಜೆಪಿ ನಿಯೋಗ...!
ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ನಿಯೋಗ, ಸರ್ಕಾರ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕಾರ್ಯ ಯೋಜನೆಗಳ ಬಗ್ಗೆ ಪಕ್ಷದ ವತಿಯಿಂದ ಸಲಹೆಯ ಮನವಿ ನೀಡಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಿಂಬಾವಳಿ, ಎನ್.ರವಿಕುಮಾರ್ ಉಪಸ್ಥಿತರಿದ್ದರು.