ಕರ್ನಾಟಕ

karnataka

ETV Bharat / state

ಬಿಜೆಪಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಜನಪ್ರಿಯತೆ ಪಡೆದ ಪಕ್ಷ: ಬೆನ್ನುತಟ್ಟಿಕೊಂಡ ಕಟೀಲ್‌ - BJP state President Nalin Kumar Katil

ಜಮ್ಮು -ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಕ್ರಮವನ್ನು ಅಲ್ಲಿನ ಜನರು ಸಮರ್ಥಿಸಿದ್ದಾರೆ ಎಂಬುದಕ್ಕೆ ಬಿಜೆಪಿ, ಜಮ್ಮು - ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ 75 ಸ್ಥಾನ ಗೆದ್ದುಕೊಂಡಿರುವುದೇ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌

By

Published : Dec 23, 2020, 7:48 PM IST

ಬೆಂಗಳೂರು: ಜಮ್ಮು - ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಜಮ್ಮು -ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಕ್ರಮವನ್ನು ಅಲ್ಲಿನ ಜನರು ಸಮರ್ಥಿಸಿದ್ದಾರೆ ಎಂಬುದಕ್ಕೆ ಬಿಜೆಪಿ 75 ಸ್ಥಾನ ಗೆದ್ದುಕೊಂಡಿರುವುದೇ ಸಾಕ್ಷಿ. ಪಕ್ಷವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಜನಪ್ರಿಯತೆ ಪಡೆದಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ. ಮುಂಬರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಅತೀ ಹೆಚ್ಚು ಸ್ಥಾನ ಪಡೆಯಲಿರುವುದರ ಮುನ್ಸೂಚನೆ ಇದಾಗಿದೆ ಎಂದರು.

ಓದಿ:ಎಚ್ಎಎಲ್, ಬಿಇಎಲ್ ಕಾರ್ಮಿಕರ ಡಿಎ ತಡೆಹಿಡಿದ ಆಡಳಿತ ಮಂಡಳಿಗಳು: ಹೈಕೋರ್ಟ್ ತಡೆಯಾಜ್ಞೆ

370ನೇ ವಿಧಿಯ ಮರುಸ್ಥಾಪನೆಯ ಉದ್ದೇಶದೊಂದಿಗೆ ಗುಪ್ಕಾರ್‌ ಮೈತ್ರಿಕೂಟ ರಚಿಸಿಕೊಂಡ ಪಕ್ಷಗಳು ಡಿಡಿಸಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇನೂ ಮಾಡಿಲ್ಲ. ಬಿಜೆಪಿ ಮತ್ತು ಪಕ್ಷೇತರರು ಒಟ್ಟು ಸೇರಿ ಶೇ.52 ಮತ ಪಡೆದಿದ್ದಾರೆ. ಕಾಂಗ್ರೆಸ್‌ ಮತ್ತು ಮೆಹಬೂಬಾ ಮುಫ್ತಿ ಅವರ ಪಿಡಿಪಿ ಪಕ್ಷಗಳು ಪಕ್ಷೇತರರಿಗಿಂತ ಕಡಿಮೆ ಸ್ಥಾನ ಪಡೆದಿದ್ದು, ಈ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ ಎಂದು ಕಟೀಲ್ ಹೇಳಿದರು.

ABOUT THE AUTHOR

...view details