ಬೆಂಗಳೂರು:ನನ್ನ ಹಾಗೂ ಸಿಎಂ ನಡುವೆ ಯಾವುದೇ ವಿವಾದ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ಪಷ್ಟಪಡಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಿನ್ನೆ ಸಿಎಂ ಔತಣಕೂಟಕ್ಕೆ ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಸಿಎಂ ಅವರನ್ನು ಔತಣಕೂಟದ ಮುಂಚೆಯೇ ಚಿಕ್ಕಮಗಳೂರಿನ ನಿಯೋಗದ ಜೊತೆ ಹೋಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ. ಬೇರೆ ಕೆಲಸ ಇದೆ ಅಂದೇಳಿ ಹೋಗಿದ್ದೆ ಎಂದು ತಿಳಿಸಿದರು.
ನನಗೆ ಅಸಮಾಧಾನ ಇಲ್ಲ:
ಇದೇ ವೇಳೆ ಶಾಸಕ ಸೋಮಶೇಖರ್ ರೆಡ್ಡಿ ಮಾತನಾಡಿ, ನಿನ್ನೆ ಸಿಎಂ ಔತಣ ಕೂಟಕ್ಕೆ ಗೈರು ವಿಚಾರವಾಗಿ ಪ್ರತಿಕ್ರಿಯಿಸಿದರು. ಸಿಎಂ ಅನುಮತಿ ಪಡದೇ ಹೋಗಿದ್ದೆ. ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.
ಓದಿ:ನಾನು ಭೋಜನ ಕೂಟಕ್ಕೆ ಭಾಗವಹಿಸಲು ಆಗಲಿಲ್ಲ: ಶಾಸಕ ತಿಪ್ಪಾರೆಡ್ಡಿ ಸ್ಪಷ್ಟನೆ
ಬಳ್ಳಾರಿ ಜಿಲ್ಲೆ ವಿಭಜನೆ ಬಗ್ಗೆ ಪ್ರತಿಕ್ರಿಯಿಸುತ್ತ, ಬಳ್ಳಾರಿ ಜಿಲ್ಲೆ ವಿಭಜನೆ ಮಾಡಲು ಬಿಡೋದಿಲ್ಲ. ಯಾವುದೇ ಕಾರಣಕ್ಕೂ ವಿಭಜನೆ ಆಗಲ್ಲ ಎಂದು ಸ್ಪಷ್ಟಪಡಿಸಿದರು.