ಕರ್ನಾಟಕ

karnataka

ETV Bharat / state

ಬಿಜೆಪಿ ಸರ್ಕಾರದ ಆಯಸ್ಸು ಕೇವಲ ಎರಡು ತಿಂಗಳು ಮಾತ್ರ: ಮಾಜಿ ಸಿಎಂ ಭವಿಷ್ಯ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮೈತ್ರಿ ಸರ್ಕಾರ ನೀಡಿದ್ದ ಅನುದಾನ ಕಡಿತ ಮಾಡಿದ ಕ್ರಮವನ್ನು ಖಂಡಿಸಿ ಸಿಎಂ ಬಿಎಸ್​ವೈ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದ ಆಯಸ್ಸು ಕೇವಲ ಎರಡು ತಿಂಗಳು ಮಾತ್ರ ಎಂದು ಭವಿಷ್ಯ ನುಡಿದಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

By

Published : Oct 1, 2019, 6:27 PM IST

ಬೆಂಗಳೂರು: ಬಿಜೆಪಿ ಸರ್ಕಾರದ ಆಯಸ್ಸು ಕೇವಲ ಎರಡು ತಿಂಗಳು ಮಾತ್ರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮೈತ್ರಿ ಸರ್ಕಾರ ನೀಡಿದ್ದ ಅನುದಾನ ಕಡಿತ ಮಾಡಿದ ಕ್ರಮವನ್ನು ಖಂಡಿಸಿ ಸಿಎಂ ಬಿಎಸ್​ವೈ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಇಂದು ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಗೊತ್ತಿದೆ, ಎರಡು ತಿಂಗಳ ಒಳಗೆ ಏನೆಲ್ಲಾ ಆಗುತ್ತದೆ ಎಂಬುದನ್ನು ಕಾದು ನೋಡಿ. ಯಡಿಯೂರಪ್ಪ ಎಷ್ಟು ದಿನ ಸರ್ಕಾರ ನಡೆಸುತ್ತಾರೆ? ಎಂದು ಮಾರ್ಮಿಕವಾಗಿ ಹೇಳಿದರು.

ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ನಾನು ನೀಡಿದ ಅನುದಾನ ಹಿಂಪಡೆಯುವುದೇ ಯಡಿಯೂರಪ್ಪನವರು ಎರಡು ತಿಂಗಳಲ್ಲಿ ಮಾಡಿದ ಸಾಧನೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದು ಅಭಿವೃದ್ಧಿ ಅಂತು ಮಾಡುತ್ತಿಲ್ಲ. ಅಭಿವೃದ್ಧಿಗೆ ಕೊಟ್ಟ ಅನುದಾನ ಹಿಂಪಡೆದು ದ್ವೇಷದ ರಾಜಕಾರಣ ಮುಂದುವರೆಸಿದ್ದಾರೆ. ಮುಖ್ಯಮಂತ್ರಿಯವರ ಈ ಧೋರಣೆ ಬದಲಾಗಬೇಕು ಎಂದರು. ಕುತಂತ್ರ ರಾಜಕಾರಣದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ವರ್ಗಾವಣೆ ಮೂಲಕ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ದೂರಿದರು.

ಬಿಜೆಪಿ ಸರ್ಕಾರದ ಕುರಿತು ಭವಿಷ್ಯ ನುಡಿದ ಮಾಜಿ ಸಿಎಂ

ಯಾವುದೇ ಕುತಂತ್ರದ ರಾಜಕಾರಣಕ್ಕೆ ನಾನು ತಲೆ ಬಗ್ಗಿಸುವುದಿಲ್ಲ. ನಾನು ನಾನು ತಲೆ ಬಗ್ಗಿಸುವುದು ನನ್ನನ್ನು ನಂಬಿದ ಜನರ ಅಭಿವೃದ್ಧಿಗಾಗಿ ಮಾತ್ರ. ಯಾರ ಮುಂದೆಯೂ ತಲೆ ಬಗ್ಗಿಸಿ ನಿಲ್ಲುವ ವ್ಯಕ್ತಿ ನಾನಲ್ಲ ಎಂದರು. ಇಂದು ಕೇವಲ ಸಾಂಕೇತಿಕ ಪ್ರತಿಭಟನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಎಚ್ಚೆತ್ತುಕೊಳ್ಳದಿದ್ರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ದಾಸರಹಳ್ಳಿಯ ಜನ ಅತ್ಯಂತ ಮುಗ್ಧರು. ಆ ಜನರಿಗಾಗಿ ನಾನು ಯಾವುದೇ ಕೆಲಸ ಮಾಡಿ ಕೋಡುತ್ತೇನೆಂದು ಮುಖ್ಯಮಂತ್ರಿಯಾಗಿದ್ದಾಗ ಶಾಸಕ ಮಂಜುನಾಥ್​​ಗೆ ಹೇಳಿದ್ದೆ. ಆ ಸಂದರ್ಭದಲ್ಲಿ ಅವರು ಮಾಡಿದ ಮನವಿಗೆ ತಕ್ಷಣ ಸುಮಾರು 600 ಕೋಟಿ ರೂ. ಅನುದಾನ ನೀಡಿದ್ದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ಎರಡು ಲಕ್ಷ ಕೋಟಿ ವೆಚ್ಚ ಮಾಡಿ ಅಮೆರಿಕಗೆ ಹೋಗಿ ಭಾಷಣ ಬಿಗಿಯುತ್ತಿದ್ದಾರೆ ಎಂದು ಕಿಡಿಕಾರಿದರು.

ಫೋನ್ ಕದ್ದಾಲಿಕೆ ಪ್ರಕರಣದ ವಿಚಾರವಾಗಿ ಕುಮಾರಸ್ವಾಮಿಗೆ ಸಂಕಷ್ಟ ಎಂದು ಸುದ್ದಿ ಮಾಡುತ್ತಿದ್ದೀರಾ. ಸಿಬಿಐ ಅಲ್ಲ ಅವರ ಅಪ್ಪ ಬಂದರು ನನಗೆ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಯಾವ ಸ್ವಾಮೀಜಿಯ ಆದೇಶದ ಮೇರೆಗೆ ನಾನು ಅಮೆರಿಕಗೆ ಹೊಗಿದ್ದೆನೋ ಅದೇ ಸ್ವಾಮೀಜಿಯ ಫೋನ್​ ಟ್ಯಾಪಿಂಗ್ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ನನ್ನ ಮತ್ತು ಸ್ವಾಮೀಜಿ ಅವರ ನಡುವಿನ ಸಂಬಂಧ ಹಾಳು ಮಾಡಲು ಕುತಂತ್ರ ಮಾಡಲಾಗುತ್ತಿದೆ ಎಂದು ದೂರಿದರು.

ABOUT THE AUTHOR

...view details