ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಿ ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್ ಅಶೋಕ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಿಎಂ ಡಿ ವಿ ಸದಾನಂದಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ ಟಿ ರವಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.