ಕರ್ನಾಟಕ

karnataka

ETV Bharat / state

ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ: ಯಾರ ಹೆಸರು ಅಂತಿಮಗೊಳಿಸಲಿದೆ ಹೈಕಮಾಂಡ್? - ಬೆಂಗಳೂರು ಲೇಟೆಸ್ಟ್​​ ಅಪ್ಡೇಟ್​​ ನ್ಯೂಸ್​​

ನೂತನ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಹೈಕಮಾಂಡ್ ನಾಳೆ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

BJP High Command
ನಾಳೆ ನೂತನ ಮುಖ್ಯಮಂತ್ರಿ ಹೆಸರು ಪ್ರಕಟ

By

Published : Jul 26, 2021, 12:46 PM IST

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್​. ಯಡಿಯೂರಪ್ಪ ಘೋಷಣೆ ಮಾಡಿದ್ದು, ನೂತನ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಹೈಕಮಾಂಡ್ ನಾಳೆ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ. ಯಡಿಯೂರಪ್ಪ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ನಾಳೆ ಬಹುತೇಕ ಉತ್ತರ ಸಿಗಲಿದೆ.

ನಾಳೆ ಬೆಳಗ್ಗೆ 9.30ಕ್ಕೆ ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಜೆಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ, ಪ್ರಹ್ಲಾದ್ ಜೋಶಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಸಂತೋಷ್, ಅರವಿಂದ ಬೆಲ್ಲದ್, ಸಿ.ಟಿ ರವಿ, ಮುರುಗೇಶ್ ನಿರಾಣಿ, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ 10ಕ್ಕೂ ಹೆಚ್ಚು ಹೆಸರುಗಳು ಸಿಎಂ‌ ರೇಸ್​​ನಲ್ಲಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿಎಸ್​​ವೈ

ABOUT THE AUTHOR

...view details