ಬೆಂಗಳೂರು:ರಾಜ್ಯದಲ್ಲಿ ಆರಂಭಗೊಂಡಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದು, ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಇಂದು ರಾತ್ರಿ 8.10ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಕುಮಾರಕೃಪಾ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 15ರಂದು ಅವರು ಹಾವೇರಿ, ಹಿರೇಕೆರೂರುಗಳಲ್ಲಿ ವಿವಿಧ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.