ಬೆಂಗಳೂರು:ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರಿದ್ರು.
ಪಕ್ಷ ಸೇರ್ಪಡೆ ಮಾಡಿಕೊಂಡ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ ಆಗಬಹುದು. ಜಿಲ್ಲಾ ಮಟ್ಟದಲ್ಲಿ ಪಕ್ಷ ಸೇರ್ಪಡೆ ಆಗಲಿ. ಕಾಂಗ್ರೆಸ್ ದೇವಾಲಯದಲ್ಲಿ ಸೇರ್ಪಡೆ ಆಗಿದ್ದೇ ನಿಮ್ಮ ಭಾಗ್ಯ. ಹೊಸಬರು ಮತ್ತು ಹಳಬರು ಅನ್ನೋ ಭೇದಭಾವ ಬೇಡ ಎಂದು ಹೇಳಿದರು.