ಕರ್ನಾಟಕ

karnataka

ETV Bharat / state

ಬಿಜೆಪಿ- ಜೆಡಿಎಸ್​ ಒಂದಾದರೆ ನಮಗೆ ಯಾವುದೇ ಭಯವಿಲ್ಲ: ವೀರಪ್ಪ ಮೊಯ್ಲಿ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ವಿರುದ್ದ ಮಾಜಿ ಸಿಎಂ ವೀರಪ್ಪಮೊಯ್ಲಿ ಕಿಡಿಕಾರಿದ್ದಾರೆ.

ಮಾಜಿ ಸಿಎಂ ವೀರಪ್ಪ ಮೊಯ್ಲಿ
ಮಾಜಿ ಸಿಎಂ ವೀರಪ್ಪ ಮೊಯ್ಲಿ

By

Published : Jul 26, 2023, 4:48 PM IST

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಮೈತ್ರಿ ಬಗ್ಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪ್ರತಿಕ್ರಿಯೆ

ಬೆಂಗಳೂರು :ಬಿಜೆಪಿ ಮತ್ತು ಜೆಡಿಎಸ್ ಒಂದಾದರೆ ಕಾಂಗ್ರೆಸ್​ ಸರ್ಕಾರಕ್ಕೆ ಯಾವುದೇ ಭಯವಿಲ್ಲ. ಅವರು ಈ ಮೊದಲೇ ಒಂದಾಗಿದ್ದರು, ಈಗ ಮತ್ತೆ ಒಂದಾಗಲೇ ಬೇಕಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ. ಯಲಹಂಕದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವೀರಪ್ಪ ಮೊಯ್ಲಿ ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಮೈತ್ರಿ ಮಾಡಿಕೊಂಡಿವೆ ಎಂದು ಕಾಂಗ್ರೆಸ್​ ನಾಯಕರು ಮಾಡುತ್ತಿರುವ ಆರೋಪ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಚುನಾವಣೆಯಲ್ಲಿ ಸೊತ್ತಿದ್ದಕ್ಕೆ ಬೇಸರವಿಲ್ಲ. ತಮ್ಮ ಸಂಪಾದನೆಯ ದಾರಿ ತಪ್ಪಿದಕ್ಕೆ ನಿರಾಸೆ ಇದೆ. ನಮ್ಮ ಪಕ್ಷವನ್ನು ಇನ್ನಷ್ಟು ಬಲಿಷ್ಟ ಮಾಡಬೇಕಾಗಿದೆ. ಇದಕ್ಕಾಗಿ ಕಾರ್ಯಕರ್ತರು ಹಗಲಿರುಳು ದುಡಿಯಬೇಕು ಎಂದು ಕರೆ ನೀಡಿದರು.

ಲೋಕಸಭೆ ಚುನಾವಣೆ ಬಂದ ಹಿನ್ನಲೆ ವೀರಪ್ಪ ಮೊಯ್ಲಿ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪಕ್ಷದ ಕಚೇರಿ ಉದ್ಘಾಟನೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನನ್ನ ವೋಟ್​​​ ಇದೆ. ಚಿಕ್ಕಬಳ್ಳಾಪುರದಲ್ಲಿ ನನ್ನ ಕಚೇರಿ ಸ್ಥಳವನ್ನ ಬದಲಾಯಿಸಲಾಗಿದೆಯೇ ಹೊರತು ಹೊಸ ಕಟ್ಟಡವನ್ನಲ್ಲ. ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಇವುಗಳನ್ನು ಮಾಡಲಾಗುತ್ತಿದೆ. ಪಕ್ಷದ ಪರವಾಗಿ ಹೇಳಿಕೆ ನೀಡುವುದು ಸಹ ಪಕ್ಷದ ಕೆಲವೇ ಆಗಿದೆ ಎಂದು ಮೊಯ್ಲಿ ಸಮರ್ಥಿಸಿಕೊಂಡರು.

ರಾಹುಲ್ ಗಾಂಧಿ ಅನರ್ಹತೆ ವಿಚಾರ :ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹತೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಅವರು, ನ್ಯಾಯಾಂಗ ವ್ಯವಸ್ಥೆಯನ್ನ ಹಾಳು ಮಾಡುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ದೇಶದಲ್ಲಿ ಯಾರಿಗೂ ಸಹ ಜೈಲು ಶಿಕ್ಷೆಯಾಗಿಲ್ಲ. ಆದರೆ, ರಾಹುಲ್ ಗಾಂಧಿ ವಿಚಾರದಲ್ಲಿ ಮಾನಹಾನಿ ಪ್ರಕರಣವನ್ನು ಕ್ರಿಮಿನಲ್ ಪ್ರಕರಣವನ್ನಾಗಿ ತೆಗೆದುಕೊಂಡು ಅಧಿಕಾರ ದುರುಪಯೋಗ ಪಡಿಸಿಕೊಳ್ಳುವ ಮೂಲಕ ಅವರ ಲೋಕಸಭಾ ಸದಸ್ಯತ್ವ ಅನರ್ಹ ಮಾಡಲಾಗಿದೆ.

ಈ ಹಿಂದೆಯೂ ಸಹ ಇಂದಿರಾ ಗಾಂಧಿ ಅವರನ್ನು ಕೂಡ ಸಂಸದ ಸ್ಥಾನದಿಂದ ಅನರ್ಹತೆ ಮಾಡಲಾಗಿತ್ತು. ಒಂದೇ ವರ್ಷದಲ್ಲಿ ಇಂದಿರಾಗಾಂಧಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರು. ಹಾಗೆಯೇ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು 2024ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದ್ದಾಗಿ ಮಾಜಿ ಸಿಎಂ ಭವಿಷ್ಯ ನುಡಿದರು.

ಹೆಚ್.ಡಿ.ದೇವೇಗೌಡರು ಹೇಳಿದ್ದೇನು? :ಬಿಜೆಪಿ ಹಾಗೂ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದ ಹಿನ್ನಲೆ ಮಾಜಿ ಪ್ರಧಾನಿ ನಿನ್ನೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಮೈತ್ರಿಕೂಟದ ಜೊತೆಯೂ ಸೇರುವ ಪ್ರಶ್ನೆಯೇ ಇಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಈ ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ. ನಾನು ಎಲ್ಲರನ್ನೂ ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಎನ್ನುವ ಸಲಹೆಯನ್ನು ಶಾಸಕರಿಗೆ ನೀಡಿದ್ದೇನೆ ಎಂದು ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಡಿಸಿದ್ದರು.

ಇದನ್ನೂ ಓದಿ :ಮಹಾಘಟಬಂಧನ್ ಸಭೆಗೆ ‘‘ಅವರು ಬಂದರೆ ನಾವು ಬರಲ್ಲ‘‘ ಎಂದರು : ದೇವೇಗೌಡ

ABOUT THE AUTHOR

...view details