ಬೆಂಗಳೂರು:ಬಿಜೆಪಿ ನೂತನ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎರಡನೇ ಬಾರಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಜನವರಿ 2 ಮತ್ತು 3 ರಂದು ಶಿವಮೊಗ್ಗದಲ್ಲಿ ನಡೆಯುವ ಪಕ್ಷದ ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ - CM B S yeddurappa News
ನಾಳೆ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಜನವರಿ 2 ಮತ್ತು 3 ರಂದು ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯಲಿದ್ದು, ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಬಿಜೆಪಿ ವಿಶೇಷ ಸಭೆ ನಡೆಸಲು ನಿರ್ಧರಿಸಿದ್ದು, ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದಿತ್ತು. 2021 ರ ಮೊದಲ ವಿಶೇಷ ಸಭೆ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಸಂಕ್ರಾಂತಿ ವೇಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಸಭೆ ಮುಗಿಸಿ ಜನವರಿ 4 ರಂದು ಅರುಣ್ ಸಿಂಗ್ ದೆಹಲಿಗೆ ವಾಪಸ್ಸಾಗಲಿದ್ದಾರೆ.
TAGGED:
Arun Singh News