ಬೆಂಗಳೂರು:ಮೋದಿ ಸರ್ಕಾರದಲ್ಲಿ ಬೆಲೆಗಳು ನಿಯಂತ್ರಣದಲ್ಲಿವೆ. ಅರ್ಥಶಾಸ್ತ್ರಜ್ಞರ ಬಳಿ ಕೇಳಿಕೊಳ್ಳಿ, ಆ ಬಗ್ಗೆ ಆರ್ಬಿಐ ಗವರ್ನರ್ ಮಾತಾಡುತ್ತಾರೆ ಎಂದು ಬೆಲೆ ಏರಿಕೆ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ಹವ್ಯಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ರೈತರ ಅಕೌಂಟ್ಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯಿಂದ ಜನರಿಗೆ ಅನುಕೂಲ ಆಗಿದೆ. ಜಲ ಮಿಷನ್ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಗಳಿಗೆ ಹಣದ ಅವಶ್ಯಕತೆ ಇದೆ. ಇದಕ್ಕಾಗಿ ಸ್ವಲ್ಪ ತೆರಿಗೆ ಸಂಗ್ರಹ ಬೇಕಾಗುತ್ತದೆ ಎಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.
ಯುಪಿಎ ಸರ್ಕಾರ ಇದ್ದಾಗಲೂ ಬೆಲೆ ಏರಿಕೆ ಆಗಿತ್ತು:
ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ಆಗುತ್ತಿರುವುದು ತಾತ್ಕಾಲಿಕ ಅಷ್ಟೇ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆ ಆಗಲಿದೆ. ಯುಪಿಎ ಸರ್ಕಾರ ಇದ್ದಾಗಲೂ ಬೆಲೆ ಏರಿಕೆ ಆಗಿತ್ತು. ಆಗ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ನೂರು ದಿನಗಳಲ್ಲಿ ಬೆಲೆ ನಿಯಂತ್ರಣ ಮಾಡುವುದಾಗಿ ಹೇಳಿದ್ದರು. ಆದರೆ ಅದು ಅವರಿಂದ ಆಗಿರಲಿಲ್ಲ. ಆಗ ಶೇ.15 ರಷ್ಟು ಬೆಲೆ ಏರಿಕೆ ಆಗಿತ್ತು. ಆದರೆ ಮೋದಿ ಅವಧಿಯಲ್ಲಿ ಬೆಲೆ ನಿಯಂತ್ರಣದಲ್ಲಿದೆ. ಮಾಧ್ಯಮದವರು ಹಣದುಬ್ಬರದ ಬಗ್ಗೆ ಚರ್ಚೆ ಮಾಡಬೇಕು. ಅದರ ಬದಲು ಒಂದು ಈರುಳ್ಳಿ, ಒಂದು ಟೊಮ್ಯಾಟೋ ಬಗ್ಗೆ ಚರ್ಚೆ ಮಾಡಬೇಡಿ. ನೀವು ಕಾಂಗ್ರೆಸ್ ರೀತಿ ಒಂದು ವಸ್ತು ಬಗ್ಗೆ ಪ್ರಶ್ನೆ ಮಾಡಿದರೆ ನಾನು ಉತ್ತರಿಸಲು ಆಗಲ್ಲ ಎಂದು ಹೇಳಿದರು.
ಡಬಲ್ ಇಂಜಿನ್ ಸರ್ಕಾರ:
ಕರ್ನಾಟಕದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಮೋದಿ ಸರ್ಕಾರದ ಪೂರ್ಣ ಆಶೀರ್ವಾದ ಬೊಮ್ಮಾಯಿ ಸರ್ಕಾರದ ಮೇಲೆ ಇದೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ. ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಆಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡುತ್ತಿವೆ ಎಂದರು.
ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆ: