ಬೆಂಗಳೂರು: ಬಿ.ವೈ ವಿಜಯೇಂದ್ರ ರಾಜ್ಯದ ಸೂಪರ್ ಸಿಎಂ ಎಂದು ಪದೇ ಪದೆ ಹೇಳಿಕೆ ನೀಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಾಕ್ಷಿ ಹಂಚಿಕೊಂಡ ಯತ್ನಾಳ್ ಬೆಂಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ನೀಡಿರುವ ಹೇಳಿಕೆಯ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ತಮ್ಮ ಹೇಳಿಕೆಯನ್ನು ಬಿಜೆಪಿ ನಾಯಕ ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ.
ವಿಜಯೇಂದ್ರ ಸೂಪರ್ ಸಿಎಂ ಎಂದು ಮರಿಸ್ವಾಮಿ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಹೇಳಿದ ಮಾತುಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ಸೂಪರ್ ಸಿಎಂ ಎಂದು ಇಷ್ಟು ದಿವಸ ನಾನು ಹೇಳುತ್ತಿದ್ದೆ. ಆದರೆ ಇದೀಗ ಅವರ ಸಂಬಂಧಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಅವರೇ ವಿಜಯೇಂದ್ರ ಅವರ ಮುಂದೆಯೇ ಈ ಮಾತನ್ನು ಹೇಳಿದ್ದಾರೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಾಕ್ಷಿ ಹಂಚಿಕೊಂಡ ಯತ್ನಾಳ್ ಇದೀಗ ರಾಜ್ಯ ಜನರ ಮುಂದೆ ನನ್ನ ಹೇಳಕೆ ಸತ್ಯವಾಗಿದೆ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಈ ವಿಡಿಯೋವನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಟ್ಯಾಗ್ ಕೂಡ ಮಾಡಿದ್ದಾರೆ.