ಬೆಂಗಳೂರು:ಚುನಾವಣೆ ವೇಳೆ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ವೋಟು ಹಾಕಿಸಿಕೊಂಡ ರಾಜ್ಯದ ಬಿಜೆಪಿ ನಾಯಕರು ಇದೀಗ ಮೋದಿಗೆ ಬೆದರಿ ತಮ್ಮ ಧ್ವನಿಯನ್ನೇ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಕನ್ನಡಿಗರ ಆತ್ಮಾಭಿಮಾನ ಕೆಣಕುವುದರಲ್ಲಿ ನಿಮಗೆಂಥ ಸಂತೋಷ: ರಾಜ್ಯ ಬಿಜೆಪಿ ನಾಯಕರಿಗೆ ಹೆಚ್ಡಿಕೆ ಟಾಂಗ್ - ಬಿಜೆಪಿ ನಾಯಕರು ಧ್ವನಿರಹಿತರು
ಚುನಾವಣೆ ವೇಳೆ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ವೋಟು ಹಾಕಿಸಿಕೊಂಡ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಧ್ವನಿಯನ್ನೇ ಕಳೆದುಕೊಂಡ ರಾಜ್ಯ ಬಿಜೆಪಿ ನಾಯಕರು: ಹೆಚ್ ಡಿಕೆ ಟೀಕೆ
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರು ಕನ್ನಡಿಗರನ್ನು ದಾಸ್ಯಕ್ಕೆ ದೂಡುವ ದಲ್ಲಾಳಿಗಳಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಕನ್ನಡಿಗರನ್ನು ರಾಜಕೀಯಕ್ಕೆ ದುಡಿಸಿಕೊಳ್ಳುವುದು, ಯೋಜನೆ, ಕಾರ್ಯಕ್ರಮ, ಅನುದಾನಗಳ ವಿಷಯದಲ್ಲಿ ಶೋಷಿಸುವುದು ಬಿಜೆಪಿಯ ಚಾಳಿಯಾಗಿದೆ. ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿರುವುದನ್ನು ಕನ್ನಡಿಗರಾಗಿ ಟೀಕಿಸಬೇಕೋ? ಬೆಂಬಲಿಸಬೇಕೋ? ಎಂದು ಪ್ರಶ್ನಿಸಿದರು.
ಕನ್ನಡಿಗರ ಆತ್ಮಾಭಿಮಾನ ಕೆಣಕುವುದರಲ್ಲಿ ನಿಮಗೆಂಥ ಸಂತೋಷ ಎಂದು ರಾಜ್ಯ ಬಿಜೆಪಿ ನಾಯಕರನ್ನು ಪ್ರಶ್ನಿಸಿ ಕಿಡಿಕಾರಿದ್ದಾರೆ.