ಕರ್ನಾಟಕ

karnataka

ETV Bharat / state

ಅತೃಪ್ತರ ರಾಜೀನಾಮೆ ವಿಚಾರ: ನಾಳೆ ರಾಜ್ಯಪಾಲರ ಭೇಟಿ ಮಾಡಲಿರುವ ಬಿಜೆಪಿ ನಾಯಕರು? - undefined

ಸಮ್ಮಿಶ್ರ ಸರ್ಕಾರದ ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ಸ್ಪೀಕರ್​ ಕೂಡಲೇ ಅಂಗೀಕರಿಸಬೇಕು ಎಂದು ಒತ್ತಾಯಿಸಿ ನಾಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದು, ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ರಾಜ್ಯಪಾಲ ವಜುಭಾಯ ವಾಲಾ

By

Published : Jul 9, 2019, 5:07 PM IST

ಬೆಂಗಳೂರು:ಅತೃಪ್ತಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ ಧೋರಣೆ ಪ್ರಶ್ನಿಸಿ ಸ್ಪೀಕರ್‌ ವಿರುದ್ಧ ನಾಳೆ ರಾಜ್ಯಪಾಲರಿಗೆ ದೂರು ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶಾಸಕರ ರಾಜೀನಾಮೆಯಿಂದ ಸರ್ಕಾರ ಬಹುಮತ ಕಳೆದುಕೊಂಡಿದ್ದು ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಆಗ್ರಹವಾಗಿದೆ.

ರಾಜ್ಯಪಾಲ ವಜುಭಾಯ ವಾಲಾ

ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಬಳಿಕ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಜೊತೆಗೆ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿಲು ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ.

For All Latest Updates

TAGGED:

ABOUT THE AUTHOR

...view details