ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ನಾಡಿನ ಸಮಸ್ತ ಮಹಿಳಾ ಸಮುದಾಯಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿದ್ದಾರೆ.
ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಮ್ಮ ನಾರಿಶಕ್ತಿಯ ಧೈರ್ಯ, ಪರಿಶ್ರಮ, ಸಾಧನೆಗಳನ್ನು ಸಂಭ್ರಮಿಸೋಣ. ಅಭಿವೃದ್ಧಿ ಪಥದಲ್ಲಿ ಎಲ್ಲರನ್ನು ಹಿಂದಿಕ್ಕಿ ಮುನ್ನುಗ್ಗುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ. ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ, ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.