ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಅಭಿಮಾನ ಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರೆಯುವಂತೆ ದೇವರು ಆಶೀರ್ವದಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
ನಮ್ಮ ನೆಚ್ಚಿನ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಆರೋಗ್ಯಪೂರ್ಣವಾಗಿ ದೀರ್ಘಾಯುಷ್ಯರಾಗಿ ರಾಷ್ಟ್ರಸೇವೆ ಮಾಡುವಂತೆ ಪ್ರಭು ಶ್ರೀರಾಮನು ಆಶೀರ್ವದಿಸಲಿ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಹಾರೈಸಿದ್ದಾರೆ.
ಆತ್ಮ ನಿರ್ಭರ ಭಾರತ ಕನಸಿನ ಮೂಲಕ ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಪಣ ತೊಟ್ಟ ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.