ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿಯಾಗಿ ಚೊಚ್ಚಲ ಶಾಸಕಾಂಗ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ - ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಮುಖ್ಯಮಂತ್ರಿಯಾದ ಬಳಿಕ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ನಡೆದ ಬಿಜೆಎಲ್​​ಪಿ ಸಭೆ ಇದಾಗಿದೆ.

bjp legislative party meeting headed by cm bommai
ಮುಖ್ಯಮಂತ್ರಿಯಾಗಿ ಚೊಚ್ಚಲ ಶಾಸಕಾಂಗ ಸಭೆ ನಡೆಸಿದ ಬೊಮ್ಮಾಯಿ

By

Published : Sep 13, 2021, 9:40 PM IST

ಬೆಂಗಳೂರು:ಮುಖ್ಯಮಂತ್ರಿ ಆಗಿ ಚೊಚ್ಚಲ ವಿಧಾನ ಮಂಡಲ ಅಧಿವೇಶನ ಎದುರಿಸುತ್ತಿರುವ ಬಸವರಾಜ ಬೊಮ್ಮಾಯಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಶಾಸಕರು, ಸಚಿವರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.

ಮುಖ್ಯಮಂತ್ರಿಯಾಗಿ ಚೊಚ್ಚಲ ಶಾಸಕಾಂಗ ಸಭೆ ನಡೆಸಿದ ಬೊಮ್ಮಾಯಿ

ಗುಜರಾತ್​​ಗೆ ತೆರಳಿದ್ದ ಸಿಎಂ ಹೆಚ್​​ಎಎಲ್​​ ವಿಮಾನ ನಿಲ್ದಾಣದಿಂದ ನೇರವಾಗಿ ಹೋಟೆಲ್​​ಗೆ ಆಗಮಿಸಿ ಶಾಸಕಾಂಗ ಸಭೆಯಲ್ಲಿ ಭಾಗಿಯಾದರು.

ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರು ಶಾಸಕರು, ಸಂಸದರು ಭಾಗವಹಿಸಿದ್ದರು.

ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಸಭೆ

ಬೆಲೆ ಏರಿಕೆ ಸೇರಿದಂತೆ ಹಲವು ವಿಷಯಗಳು ಸದನದಲ್ಲಿ ಪ್ರತಿಧ್ವನಿಸಲಿದ್ದು, ಸಚಿವರು ಸಮರ್ಪಕವಾಗಿ ಉತ್ತರ ನೀಡಬೇಕು, ಸರ್ಕಾರದ ಬೆಂಬಲಕ್ಕೆ ಬರಬೇಕು, ಶಾಸಕರು ಕೂಡ ಸರ್ಕಾರದ ಬೆನ್ನಿಗೆ ನಿಲ್ಲಬೇಕು, ಪ್ರತಿಪಕ್ಷಗಳ ಆರೋಪಕ್ಕೆ‌ ತಕ್ಕ ಉತ್ತರ ಕೊಡಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಶಾಸಕಾಂಗ ಸಭೆ

ಇನ್ನು ಮೊದಲ ಅಧಿವೇಶನದಲ್ಲಿ ಸ್ವಪಕ್ಷೀಯ ಸದಸ್ಯರಿಂದಲೇ ಮುಜುಗರಕ್ಕೀಡಾಗುವ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನಗಳು ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನವನ್ನು ಸಿಎಂ ನಡೆಸಿದ್ರು ಎನ್ನಲಾಗಿದೆ.

For All Latest Updates

ABOUT THE AUTHOR

...view details