ಕರ್ನಾಟಕ

karnataka

ETV Bharat / state

ಕಲಾಪದಲ್ಲಿ ಹಾಜರಿರಬೇಕು, ಸಚಿವರ ಬೆಂಬಲಕ್ಕೆ ನಿಲ್ಲಬೇಕು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೂಚನೆ..! - ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರಿಗೆ ಸೂಚನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟಿಲ್ ಸೇರಿದಂತೆ ಸಚಿವರು, ಶಾಸಕರು ಭಾಗವಹಿಸಿದ್ದರು.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬಿಜೆಪಿ ಶಾಸಕಾಂಗ ಪಕ್ಷದ ಸಭೆ

By

Published : Sep 21, 2021, 11:26 AM IST

ಬೆಂಗಳೂರು: ಸದನದಲ್ಲಿ ಪ್ರತಿಪಕ್ಷಗಳ ಆರೋಪಗಳಿಗೆ ತಕ್ಕ ಉತ್ತರ ನೀಡುವ ಕುರಿತು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಶಾಸಕರು ಸದನದಲ್ಲಿ ಹಾಜರಿದ್ದು, ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಸೂಚಿಸಲಾಯಿತು.

ವಿಧಾನಸೌಧದ ಸಮ್ಮೆಳನ ಸಭಾಂಗಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟಿಲ್ ಸೇರಿದಂತೆ ಸಚಿವರು, ಶಾಸಕರು ಭಾಗವಹಿಸಿದ್ದರು.

ಇನ್ನು ನಾಲ್ಕು ದಿನಗಳ ಕಲಾಪ ಮಾತ್ರ ಉಳಿದಿದ್ದು, ನಾಲ್ಕೂ ದಿನ ಶಾಸಕರು ಕಲಾಪದಲ್ಲಿ ಹಾಜರಿರಬೇಕು, ಪ್ರಮುಖ ವಿಧೇಯಕಗಳ ಚರ್ಚೆ ವೇಳೆ ಉಪಸ್ಥಿತರಿರಬೇಕು, ಪ್ರತಿಪಕ್ಷಗಳ ಆರೋಪಗಳಿಗೆ ಸಚಿವರು ಉತ್ತರ ನೀಡುವಾಗ ಸಚಿವರ ಸಮರ್ಥನೆಗೆ ನಿಲ್ಲಬೇಕು ಎಂದು ಸೂಚನೆ ನೀಡಲಾಯಿತು.

ABOUT THE AUTHOR

...view details