ಬೆಂಗಳೂರು:ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 'ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂಬ ಬರಹವುಳ್ಳ ಕರಪತ್ರ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು.
ಬೆಂಗಳೂರಲ್ಲಿ ಶಾಸಕ ಸುನಿಲ್ ಕುಮಾರ್ ಏಕಾಂಗಿ ಪ್ರತಿಭಟನೆ; ಪೊಲೀಸ್ ವಶಕ್ಕೆ - ಬೆಂಗಳೂರು
ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಾಸಕ ಸುನಿಲ್ ಕುಮಾರ್ ಪೊಲೀಸ್ ವಶಕ್ಕೆ
Published : Jan 4, 2024, 10:51 AM IST
|Updated : Jan 4, 2024, 1:06 PM IST
ಪೊಲೀಸರು ವಶಕ್ಕೆ ಪಡೆಯುವ ಸಂಧರ್ಭದಲ್ಲಿ ಮಾತನಾಡಿದ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರೆಸಿದ್ದಾರೆ' ಎಂದು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಇದನ್ನೂ ಓದಿ:ನಮ್ಮ ಹೋರಾಟ ನಿಂತಿಲ್ಲ, ಜ.9ಕ್ಕೆ ಹುಬ್ಬಳ್ಳಿಯಲ್ಲಿ ಮತ್ತೆ ಬೃಹತ್ ಪ್ರತಿಭಟನೆ: ಆರ್ ಅಶೋಕ್
Last Updated : Jan 4, 2024, 1:06 PM IST