ಕರ್ನಾಟಕ

karnataka

ಜಿಗಣಿ ಪುರಸಭೆ ಬಿಜೆಪಿ ತೆಕ್ಕೆಗೆ: ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

By

Published : Nov 9, 2020, 10:57 PM IST

ಜಿಗಣಿ ಪುರಸಭೆಯಲ್ಲಿ ಒಟ್ಟು 23 ಸದಸ್ಯರು ಇದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಯಾರೂ ಕೂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

BJP municipal council election
ಜಿಗಣಿ ಪುರಸಭೆ ಬಿಜೆಪಿ ತೆಕ್ಕೆಗೆ: ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಆನೇಕಲ್:ತಾಲ್ಲೂಕಿನ ಜಿಗಣಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಮಮತ ನರಸಿಂಹರೆಡ್ಡಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗೇಶ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಂತಿಮವಾಗಿ ಅವಿರೋಧವಾಗಿ ಮಮತ ಅವರು ಅಧ್ಯಕ್ಷೆಯಾಗಿ ಹಾಗೂ ಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಸಿ.ಮಹಾದೇವಯ್ಯ ಘೋಷಿಸಿದರು.

ಜಿಗಣಿ ಪುರಸಭೆ ಬಿಜೆಪಿ ತೆಕ್ಕೆಗೆ: ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಜಿಗಣಿ ಪುರಸಭೆಯಲ್ಲಿ ಒಟ್ಟು 23 ಸದಸ್ಯರು ಇದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಯಾರು ಕೂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ನೂತನ ಅಧ್ಯಕ್ಷೆ ಮಮತ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರ ಹಾಗೂ ಶಾಸಕ ಎಂ.ಕೃಷ್ಣಪ್ಪ ಅವರ ಆಶೀರ್ವಾದಿಂದ ನಾನು ಅಧ್ಯಕ್ಷಳಾಗಿ ಆಯ್ಕೆಯಾಗಿದ್ದೇನೆ. ಉಳಿಕೆಯ ಅವಧಿಯಲ್ಲಿ ಹೆಚ್ಚು ಕೆಲಸ ಮಾಡಿ ಎಲ್ಲಾ ವಾರ್ಡ್​ಗಳ ಅಭಿವೃದ್ಧಿಗೆ ಶ್ರಮವಹಿಸಿ ಕಾರ್ಯನಿರ್ವಹಿಸಲಾಗುವುದು ಎಂದರು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಬಿಜೆಪಿ ಮುಖಂಡರು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೆ.ಸಿ. ರಾಮಚಂದ್ರ, ಎಂ.ಸಿ. ರಾಜಪ್ಪ, ಮೆಡಿಕಲ್ ಬಾಬು, ಗಿರೀಶ್, ಪ್ರವೀಣ್, ಮುಖ್ಯಾಧಿಕಾರಿ ಅಮರನಾಥ್ ಮುಂತಾದವರು ಹಾಜರಿದ್ದರು.

ABOUT THE AUTHOR

...view details