ಬೆಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದಿನಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದ್ದು, ಚುನಾವಣೆ, ಪಕ್ಷ ವಿಸ್ತರಣೆ ಮತ್ತು ಮೋದಿ ಆಡಳಿತವನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವ ಪ್ರಮುಖ ವಿಷಯಗಳು ಚರ್ಚೆಯಾಗಲಿವೆ.
ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಓದಿ:ಭಾಗ್ಯನಗರಿಯಲ್ಲಿ ಇಂದಿನಿಂದ 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ
ಎರಡು ದಿನ ಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗಿಯಾಗಲಿದ್ದು, ಭಾನುವಾರ ಸಂಜೆ ಹೈದರಾಬಾದ್ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಲವು ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಕೊರೊನಾ ವೈರಸ್‌ನಿಂದಾಗಿ ಕಾರ್ಯಕಾರಿ ಗುಂಪು ಸಭೆಗಳು ದೊಡ್ಡ ಮಟ್ಟದಲ್ಲಿ ನಡೆದಿಲ್ಲ. ಮುಂದಿನ ವರ್ಷ ಹಲವಾರು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು 2024 ರಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿವೆ. ಹೀಗಾಗಿ ಪ್ರಸ್ತುತ ಹೈದರಾಬಾದ್‌ನಲ್ಲಿ ನಡೆಯುವ ಸಮಾವೇಶದಲ್ಲಿ ಈ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.