ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ಸಿಪಿ ಮೈತ್ರಿ ಸರ್ಕಾರ ರಚನೆಯನ್ನು ರಾಜ್ಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ಸಿಪಿ ಸರ್ಕಾರ ರಚನೆ: ರಾಜ್ಯ ಕಾಂಗ್ರೆಸ್ ಖಂಡನೆ - ಮಹಾರಾಷ್ಟ್ರದಲ್ಲಿ ಬಿಜೆಪಿ -ಎನ್ಸಿಪಿ ಮೈತ್ರಿ ಸರ್ಕಾರ ರಚನೆ
ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ಸಿಪಿ ಮೈತ್ರಿ ಸರ್ಕಾರ ರಚನೆಯನ್ನು ರಾಜ್ಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಟ್ವೀಟ್ ಮೂಲಕ ತನ್ನ ಬೇಸರ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯೊಂದಿಗಿದ್ದರೆ ಅಪವಿತ್ರ ಪವಿತ್ರವಾಗುತ್ತದೆ. ಅತ್ಯಂತ ಗೌಪ್ಯವಾಗಿ ಮಧ್ಯರಾತ್ರಿಯಲ್ಲೂ ರಾಷ್ಟ್ರಪತಿ ಆಳ್ವಿಕೆ ಹಿಂಪಡೆಯಲಾಗುತ್ತದೆ. ರಾಜಭವನವು ಕೇಂದ್ರ ಬಿಜೆಪಿ ಪಕ್ಷಕ್ಕಾಗಿ ರಾತ್ರಿಯೆಲ್ಲ ಕೆಲಸ ಮಾಡುತ್ತದೆ ಎಂದು ಆರೋಪಿಸಿದೆ. ರಾತ್ರೋರಾತ್ರಿ ಸಮೀಕರಣಗಳು ಬದಲಾಗಿ ಶಾಸಕರು, ಪಕ್ಷಗಳು ತಮ್ಮ ನಿಲುವನ್ನು ಬದಲಾಯಿಸುತ್ತಾರೆ. ಸ್ವಾಯತ್ತ ಸಂಸ್ಥೆಗಳು+ಬಿಜೆಪಿ= ಸರ್ಕಾರ ಎಂಬಂತಾಗಿದೆ ಎಂದು ಕಾಂಗ್ರೆಸ್ ದೂರಿದೆ.
ರಾಜ್ಯ ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಸೇರಿದಂತೆ ಹಲವರು ಮಹಾರಾಷ್ಟ್ರ ಸರ್ಕಾರ ರಚನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.