ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶನಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಸೌಜನ್ಯದ ಭೇಟಿ ಎಂದು ಹೇಳಲಾಗುತ್ತಿದ್ದರೂ ಪ್ರಸಕ್ತ ರಾಜಕೀಯ ವಿದ್ಯಮಾನ, ರೌಡಿ ಶೀಟರ್ ಸೇರ್ಪಡೆಯ ಗದ್ದಲದ ಮಧ್ಯೆ ಭೇಟಿ ಕುತೂಹಲ ಕೆರಳಿಸಿದೆ.
ಕುತೂಹಲ ಮೂಡಿಸಿದ ಬಿಎಸ್ವೈ-ನಳಿನ್ ಕುಮಾರ್ ಕಟೀಲ್ ಭೇಟಿ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಮಾಜಿ ಸಿಎಂ ಬಿಎಸ್ವೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ್ಧಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ, ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ಭೇಟಿಯ ವೇಳೆ ಕಟೀಲ್ ಕೆಲ ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷ ಸಂಘಟನೆ ಜತೆಗೆ ರೌಡಿ ಶೀಟರ್ ಪಕ್ಷ ಸೇರ್ಪಡೆ ಸಂಬಂಧ ಉಂಟಾಗಿರುವ ವಿವಾದ ತಣಿಸುವ ಸಂಬಂಧವೂ ಮಾಜಿ ಸಿಎಂ ಜತೆ ಸಲಹೆ ಸೂಚನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಕಾಲ ನಳಿನ್ ಕುಮಾರ್ ಕಟೀಲ್ ಅನಾರೊಗ್ಯ ಕಾರಣ ಆಸ್ಪತ್ರೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ:ಭಯೋತ್ಪಾದಕ ಕೃತ್ಯ ನಡೆಸಲು ಯತ್ನಿಸಿದವರ ವಿರುದ್ಧ ಕ್ರಮ: ಕಟೀಲ್