ಬೆಂಗಳೂರು: ನನ್ನ ಮತ್ತು ಬಿಜೆಪಿ ನಾಯಕರ ಮೇಲೆ ಮಾಡಿದ ಆರೋಪವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಾಬೀತು ಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿ ನನ್ನ ಮೇಲೆ ಮಾಡಿರುವ ಆರೋಪ ಸಾಬೀತಾದರೆ ರಾಜಕೀಯದಿಂದ ನಿವೃತ್ತಿ: ಬಿಎಸ್ವೈ - undefined
ರಾಹುಲ್ ಗಾಂಧಿ ತಮ್ಮ ಆರೋಪಕ್ಕೆ ಬದ್ಧರಾಗಿ ನನ್ನ ಮತ್ತು ನಾಯಕರುಗಳ ಮೇಲೆ ಮಾಡಿದ ಆಪಾದನೆಗಳನ್ನು ಸಾಬೀತು ಪಡಿಸಬೇಕು. ಇಲ್ಲವಾದರೆ ಅವರ ಹುದ್ದೆಗೆ ರಾಜೀನಾಮೆ ನೀಡಬೇಕು. ಇಲ್ಲವೇ ನನ್ನ ಮೇಲೆ ಮಾಡಿರುವ ಆರೋಪ ಸಾಬೀತಾದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೆನೆ.

ರಾಹುಲ್ ಗಾಂಧಿ ನೆಲಂಮಗಲ ಸಮಾವೇಶದಲ್ಲಿ ಮಾಡಿದ ಭಾಷಣದ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಯಡಿಯೂರಪ್ಪ, ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಆದಾಯ ತೆರಿಗೆ ಇಲಾಖೆಯೇ ನಕಲಿ ಡೈರಿ ಎಂದು ಹೇಳಲ್ಪಟ್ಟಿರುವ ಡೈರಿಯನ್ನು ಉಲ್ಲೇಖಿಸುತ್ತಾ ರಾಹುಲ್ ಗಾಂಧಿ ಬಿಜೆಪಿ ನಾಯಕರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿಗೆ ಕಪ್ಪ ನೀಡಿರುವುದಾಗಿ ಅವಹೇಳನ ಮಾಡಿದ್ದಾರೆ. ಈ ಹೇಳಿಕೆಯಿಂದ ಅವರು ರಾಷ್ಟ್ರದ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ಅವರ ಘನತೆಗೆ ತಕ್ಕುದಲ್ಲ ಎಂದು ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ತಮ್ಮ ಆರೋಪಕ್ಕೆ ಬದ್ಧರಾಗಿ ನನ್ನ ಮತ್ತು ನಾಯಕರುಗಳ ಮೇಲೆ ಮಾಡಿದ ಆಪಾದನೆಗಳನ್ನು ಸಾಬೀತು ಪಡಿಸಬೇಕು. ಇಲ್ಲವಾದರೆ ಅವರ ಹುದ್ದೆಗೆ ರಾಜೀನಾಮೆ ನೀಡಬೇಕು. ನನ್ನ ಸವಾಲನ್ನು ಅವರು ಸ್ವೀಕರಿಸಬೇಕು. ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.