ಬೆಂಗಳೂರು : ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕಾಗಿ ನಡು ರಸ್ತೆಯಲ್ಲೇ ಪೆಂಡಾಲ್ ಹಾಕಿ ರಸ್ತೆಯನ್ನೇ ಬ್ಲಾಕ್ ಮಾಡಲಾಗಿದ್ದು, ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಪರದಾಡುವಂತಾಗಿದೆ.
ಕೇಸರಿ ಪಡೆಯ ಸಾರಥಿ ಪದಗ್ರಹಣ, ರಸ್ತೆಯಲ್ಲೇ ವೇದಿಕೆ ನಿರ್ಮಾಣ.. ಬಿಜೆಪಿ ಯಡವಟ್ಟು
ಬಿಜೆಪಿ ಕಚೇರಿ ಎದುರಿಗಿರುವ ಸರ್ಕಾರಿ ಶಾಲೆ ನಡೆಯುತ್ತಿರುವಾಗಲೇ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕಾಗಿ ದೊಡ್ಡ ಲೌಡ್ ಸ್ಪೀಕರ್‌ಗಳನ್ನು ಹಾಕಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿ ಉಂಟಾಗಿದೆ.
ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಕಾಡುಮಲ್ಲೇಶ್ವರ ದೇವಸ್ಥಾನ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದೆ. ದೇವಸ್ಥಾನದ ಆಸುಪಾಸಿನ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಿಜೆಪಿ ಕಚೇರಿ ಎದುರಿಗೆ ಇರುವ ಸರ್ಕಾರಿ ಶಾಲೆ ನಡೆಯುತ್ತಿರುವಾಗಲೇ ದೊಡ್ಡ ಲೌಡ್ ಸ್ಪೀಕರ್‌ಗಳನ್ನು ಹಾಕಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಇದರಿಂದ ಕಿರಿಕಿರಿ ಉಂಟಾಗಿದೆ.
ಬಿಜೆಪಿ ನೂತನ ಅಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಸಮಾರಂಭಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಬಿಜೆಪಿ, ಪಕ್ಷದ ಕಚೇರಿ ಎದುರಿನ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಿದೆ. ಒಂದು ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪದಗ್ರಹಣ ಸಮಾರಂಭ ಆರಂಭಗೊಳ್ಳಲಿದ್ದು, ಅದಕ್ಕೂ ಮುನ್ನ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ಕಟೀಲ್ ಮತ್ತು ಸಿಎಂ ಯಡಿಯೂರಪ್ಪ ಅವರು ದರ್ಶನ ಪಡೆಯಲಿದ್ದಾರೆ. ಬಳಿಕ ಯಡಿಯೂರಪ್ಪನವರು ಕಟೀಲ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.