ಬೆಂಗಳೂರು :ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯ ಎಸ್.ರವಿ ಅವರು ವೇದಿಕೆ ಮೇಲೆಯೇ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮೇಲೆ ಹಲ್ಲೆಗೆ ಮುಂದಾಗಿದ್ದನ್ನು ಖಂಡಿಸಿ ಸದಾಶಿವನಗರದಲ್ಲಿನ ಡಿ.ಕೆ. ಸುರೇಶ್ ಮನೆಗೆ ಮುತ್ತಿಗೆ ಹಾಕಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.
ಸದಾಶಿವನಗರದ ಭಾಷ್ಯಾಂ ವೃತ್ತದಲ್ಲಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಮನೆ ಎದುರಿಗೆ ಬಿಜೆಪಿ ಮಹಾನಗರ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಡಿ.ಕೆ ಬ್ರದರ್ಸ್ ಕಳ್ಳರು, ಗೂಂಡಾಗಳು ಎಂದು ಕೂಗಿ ಬಿಜೆಪಿ ಕಾರ್ಯಕರ್ತರು ಡಿ.ಕೆ ಸುರೇಶ್ ವಿರುದ್ಧ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ