ಬೆಂಗಳೂರು:ಇಂದು ಸದಾಶಿವ ನಗರದ ನಿವಾಸದಲ್ಲಿ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದ ಮಾಜಿ ಶಾಸಕ ರಾಜು ಕಾಗೆ ಅವರನ್ನು ಕಾಂಗ್ರೆಸ್ ಪಕ್ಷ, ಕಾಗವಾಡದಿಂದ ಅಭ್ಯರ್ಥಿಯನ್ನಾಗಿ ಇಳಿಸಲು ಮುಂದಾಗಿದೆ. ಈ ಸಂಬಂಧ ಡಿಕೆಶಿ ಜೊತೆ ಕಾಗೆ ಚರ್ಚೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಡಿ.ಕೆ.ಶಿ ಭೇಟಿಯಾಗಿ ಕುತೂಹಲ ಮೂಡಿಸಿದ ರಾಜು ಕಾಗೆ, ಅಶೋಕ್ ಪೂಜಾರಿ - ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಪೂಜಾರಿ
ಕಾಗವಾಡ ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಅವರು ಇಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ರಾಜು ಕಾಗೆ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಗವಾಡ ಕ್ಷೇತ್ರದಿಂದ ರಾಜು ಕಾಗೆಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್ ಮಾಡಿತ್ತು. ಗೋಕಾಕ್ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಪೂಜಾರಿಯವರನ್ನು ರಮೇಶ್ ಜಾರಕಿಹೊಳಿ ವಿರುದ್ಧ ಗೋಕಾಕ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಾರೆಯೇ ಎನ್ನುವ ಅನುಮಾನ ಕೂಡ ವ್ಯಕ್ತವಾಗಿದ್ದು, ಅದಕ್ಕೆ ಇಂದಿನ ಈ ಭೇಟಿ ಪುಷ್ಟಿ ನೀಡುವಂತಿದೆ.
ಇಬ್ಬರು ನಾಯಕರ ಜೊತೆ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದು, ಈ ಮೂಲಕ ಬೆಳಗಾವಿ ರಾಜಕಾರಣಕ್ಕೆ ಡಿಕೆಶಿ ಎಂಟ್ರಿ ಕೊಟ್ಟಿದ್ದಾರೆ ಎಂಬ ಕುತೂಹಲ ಮೂಡಿದೆ. ರಮೇಶ್ ಜಾರಕಿಹೊಳಿ ವಿರುದ್ಧ ರಾಜಕೀಯ ತಂತ್ರಗಾರಿಕೆಯಲ್ಲಿ ನಿರತರಾದ ಡಿ.ಕೆ. ಶಿವಕುಮಾರ್ ಅವರು, ಈ ಇಬ್ಬರು ನಾಯಕರ ಜೊತೆ ಮಾತುಕತೆ ನಡೆಸಿ ರಾಜಕೀಯ ದಾಳ ಉರುಳಿಸಿದ್ದಾರೆ ಎಂಬ ಮಾಹಿತಿ ಇದೆ.