ಬೆಂಗಳೂರು: ಮೀನು ತಿಂದು ದೇವಸ್ಥಾನಕ್ಕೆ ಪ್ರವೇಶ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ನೆಲದ ಸಂಸ್ಕೃತಿ, ಪಾವಿತ್ರ್ಯತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಠ ಮಾಡುತ್ತಿರುವುದು ವಿಪರ್ಯಾಸ ಎಂದು ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿರುವುದಕ್ಕೆ ಬಿಜೆಪಿ ಕಿಡಿಕಾರಿದೆ.