ಬೆಂಗಳೂರು:ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಆತ ಹಿಂದೂಗಳು, ಕ್ರಿಶ್ಚಿಯನ್ನರ ಮಾರಣ ಹೋಮ ಮಾಡಿದ ಇತಿಹಾಸವನ್ನು ಬಿಜೆಪಿ ಮರೆಯುವುದಿಲ್ಲ. ಅವರ ಕುರಿತು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿಕೆ ವೈಯಕ್ತಿಕವಾದದ್ದು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಪ್ಪು ಓರ್ವ ಮತಾಂಧ, ವಿಶ್ವನಾಥ್ ಹೇಳಿಕೆ ವೈಯಕ್ತಿಕ: ಬಿಜೆಪಿ ವಕ್ತಾರ ಕಾರ್ಣಿಕ್ - tippu latest news
ಟಿಪ್ಪು ಸುಲ್ತಾನ್ ಮತಾಂಧ. ಇಸ್ಲಾಮಿಕ್ ಸಾಮ್ರಾಜ್ಯ ಸ್ಥಾಪಿಸುವ ವೇಳೆ ಆತ ಹಿಂದೂ ಹಾಗೂ ಕ್ರಿಶ್ಚಿಯನ್ನರ ಮಾರಣ ಹೋಮ ನಡೆಸಿದ್ದನ್ನು ಮರೆಯಲಾಗದು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪ್ರಕಟಣೆ ಬಿಡುಗಡೆಗೊಳಿಸಿದ್ದಾರೆ.
ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್
ಟಿಪ್ಪು ಕತ್ತಿಯ ಹರಿತದಿಂದ ಜನರನ್ನು ಮತಾಂತರಗೊಳಿಸಲು ಯತ್ನಿಸಿದ್ದ. ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯನ್ನಾಗಿಸುವ ಮೂಲಕ ಕನ್ನಡ ವಿರೋಧಿಯೂ ಆಗಿದ್ದಾನೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ಎಂದಿಗೂ ಟಿಪ್ಪುಸುಲ್ತಾನ್ ಉತ್ತಮ ಆಡಳಿತಗಾರ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಟಿಪ್ಪು ವಿಚಾರದಲ್ಲಿ ಪಕ್ಷ ತನ್ನ ನಿಲುವನ್ನು ಬದಲಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.